ಸುನಂದಾ ಪುಶ್ಕರ್ ಸಾವಿನ ಪ್ರಕರಣ: ಪ್ರಕರಣದ ವಿಳಂಭವೇಕೆ?
ಸುನಂದಾ ಪುಷ್ಕರ್ ಸಾವಿನ ಪ್ರಕರಣದ ವಿಳಂಭದ ತನಿಖೆಯನ್ನು ಚುರುಕುಗೊಳಿಸುವಂತೆ ಸಾರ್ವಜನಿಕ ಹಿತಾ ಸಕ್ತಿ ಅರ್ಜಿ...

ನವದೆಹಲಿ: ಮಾಜಿ ಕೇಂದ್ರ ಸಚಿವ ಶಶಿ ತರೂರ್, ತಮ್ಮ ಪತ್ನಿ ಸುನಂದಾ ಪುಷ್ಕರ್ ಸಾವಿನ ಕುರಿತು, ತರೂರ್ ತಮ್ಮ ಸಹಾಯಕನೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ಮಾಡಿದ ವರದಿಯನ್ನು, ದೆಹಲಿ ಪೊಲೀಸರು ಯಾವಾಗ ಪ್ರಕಟಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣ್ಯ ಸ್ವಾಮಿ ಪ್ರಶ್ನಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ದೆಹಲಿಯ ಲೀಲಾ ಹೋಟೆಲ್ನಲ್ಲಿ ಕಳೆದ ಜ.17ರಂದು ನಿಗೂಡ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಆದರೆ ದೆಹಲಿ ಪೊಲೀಸರ ತನಿಖೆಯಲ್ಲಿ ಯಾವುದೇ ಮಾಹಿತಿಗಳು ಹೊರಬೀಳದಿರುವುದಕ್ಕೆ ಸುಬ್ರಮಣ್ಯ ಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಕುರಿತು ಸುಬ್ರಮಣ್ಯ ಸ್ವಾಮಿ, ದೆಹಲಿ ಪೊಲೀಸರು ಶಶಿ ತರೂರ್ ತಮ್ಮ ಪತ್ನಿ ಸಾವಿನ ಕುರಿತು, ತಮ್ಮ ಸಹಾಯಕನೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ಮಾಡಿದ ವರದಿಯನ್ನು, ದೆಹಲಿ ಪೊಲೀಸರು ಯಾವಾಗ ಪ್ರಕಟಿಸಲಿದ್ದಾರೆ ಎಂದು ಟ್ವಿಟರ್ನಲ್ಲಿ ಪ್ರಶ್ನಿಸಿದ್ದಾರೆ.
ಸುನಂದಾ ಪುಷ್ಕರ್ ನಿಗೂಡ ಸಾವಿನ ದಿನದಂದು, ತರೂರ್ ಅವರ ಆಪ್ತ ಸಹಾಯಕ, ತರೂರ್ಗೆ ಕರೆ ಮಾಡಿ 'ಸುನಂದಾ ಪುಷ್ಕರ್ ಇನ್ನಿಲ್ಲ' ಎಂಬ ಸಂಭಾಷಣೆಯನ್ನು ದೆಹಲಿ ಪೊಲೀಸರು ಯಾವಾಗ ಬಹಿರಂಗಗೊಳಿಸಲಿದ್ದಾರೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಅಲ್ಲದೆ ಸುನಂದಾ ಪುಷ್ಕರ್ ಸಾವಿನ ಪ್ರಕರಣದ ವಿಳಂಭವನ್ನು ಖಂಡಿಸಿ ಹಾಗೂ ತನಿಖೆಯನ್ನು ಚುರುಕುಗೊಳಿಸುವಂತೆ ಸಾರ್ವಜನಿಕ ಹಿತಾ ಸಕ್ತಿ ಅರ್ಜಿ ಸಲ್ಲಿಸುವುದಾಗಿ ಸುಬ್ರಮಣ್ಯ ಸ್ವಾಮಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


