ದೇಶ

ಬ್ರಿಸ್ಬೇನ್‌ನಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಆಸ್ಟ್ರೇಲಿಯಾದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬ್ರಿಸ್ಬೇನ್‌ನಲ್ಲಿ ಗಾಂಧಿ...

ಬ್ರಿಸ್ಬೇನ್‌ನಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮೋದಿ
Published On :

ಬ್ರಿಸ್ಬೇನ್: ಆಸ್ಟ್ರೇಲಿಯಾದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬ್ರಿಸ್ಬೇನ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ.

 ಜಿ-20 ಶೃಂಗ ಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರೋಮ್ ಸ್ಟ್ರೀಟ್ ಪಾರ್ಕ್‌ಲ್ಯಾಂಡನಲ್ಲಿ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪ ನಮನ ಸಲ್ಲಿಸಿದ್ದಾರೆ.

ತದ ನಂತರ ಮಾತನಾಡಿದ ಅವರು, ಆಸ್ಟ್ರೇಲಿಯಾದಲ್ಲಿ ಪ್ರವಾಸದಲ್ಲಿ ಇದು ಮರೆಯಲಾಗದ ಕ್ಷಣ. ಗಾಂಧಿ ಪ್ರತಿಮೆ ನಿರ್ಮಿಸಲು ಅವಕಾಶ ನೀಡಿದ್ದಕ್ಕೆ ಇಲ್ಲಿನ ಅಧಿಕಾರಿಗಳಿಗೆ ನನ್ನ ಅಭಿನಂದನೆ ಎಂದಿದ್ದಾರೆ.

ಗಾಂಧಿ ಪ್ರಕೃತಿಯ ಪ್ರೇಮಿಯಾಗಿದ್ದರು. ಅದೇ ರೀತಿ ಪ್ರಕೃತಿಯ ರಕ್ಷಣೆಗೆ ಮುಂದಾಗಿದ್ದರು. ನೀರನ್ನು ವ್ಯರ್ಥ ಮಾಡಬಾರದು ಎಂದು ಗಾಂಧಿ ಕರೆ ನೀಡಿದದ್ದರು. ಗಾಂಧಿಯವರ ಈ ನಡೆಯನ್ನು ನಾವು ಅನುಸರಿಸಿ, ಪ್ರಕೃತಿಯನ್ನು ರಕ್ಷಿಸಬೇಕು.

ಅಹಿಂಸೆ ಗಾಂಧಿ ಅವರ ಮಾರ್ಗ. ಗಾಂಧಿ ತತ್ವ ಆದರ್ಶ ನಂಬಿದ್ದೇನೆ. ಎಲ್ಲರೂ ಗಾಂಧಿ ತತ್ವಾ ಆದರ್ಶವನ್ನು ಪಾಲಿಸಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಹೇಳಿದ್ದಾರೆ.

ಅಲ್ಲಿನ ಮೇಯರ್ ಮಾತನಾಡಿ, 1999ರಲ್ಲಿ ಮೋದಿ ಅವರು ಬಿಜೆಪಿ ಕಾರ್ಯಕರ್ತರಾಗಿದ್ದಾಗ ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಬೇಕು ಎಂಬ ಆಶಯ ವ್ಯಕ್ತಪಡಿಸಿದ್ದರು. ಇಂದು ಆ ಕನಸು ನನಸಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.