ಖಿನ್ನತೆಯಿಂದ ಬಳಲುತ್ತಿದ್ದ ಬಿಬಿಎಂಪಿ ಸದಸ್ಯೆ ಲಲಿತಾ ನಿಧನ
ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ...

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ, ಬಿಬಿಎಂಪಿ ಗಿರಿನಗರ ವಾರ್ಡ್ ಸದಸ್ಯೆ ಎಚ್.ಎಸ್.ಲಲಿತಾ ಬುಧವಾರ ನಿಧನರಾಗಿದ್ದಾರೆ.
ಲಲಿತಾ ಅವರು ಕ್ಲೆಪ್ಟೋಮೆನಿಯಾ ಎಂಬ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಹಿಂದೆ ಮಾನಸಿಕ ವ್ಯಾದಿಯಿಂದಾಗಿ ಅವರು ಕಳ್ಳತನ ಮಾಡಿದ್ದರು ಎಂಬ ವಿಷಯ ತಡವಾಗಿ ಬೆಳಕಿಗೆ ಬಂದಿತ್ತು. ಆದರೆ ಕಳ್ಳತನ ಆರೋಪ ರಾಜ್ಯದಲ್ಲೆಡೆ ಸುದ್ದಿಯಾಗಿ ಅವಮಾನಕ್ಕೆ ಒಳಗಾಗಿದ್ದರು. ಬಳಿಕ ಲಲಿತಾ ಅವರು ಹಲವು ದಿನಗಳಿಂದ ಮನೆಯವರ ಕಣ್ಣು ತಪ್ಪಿಸಿ ಮಾತ್ರೆಗಳನ್ನು ಸೇವಿಸುತ್ತಿದ್ದರು, ಇದರ ಪರಿಣಾಮವಾಗಿ ನ.18 ರಂದು ತೀವ್ರವಾಗಿ ಅಸ್ವಸ್ಥಗೊಂಡ ಲಲಿತಾ ಅವರನ್ನು ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಿಧನ ಹೊಂದಿದ್ದಾರೆ.
ಏ.22ರಂದು ಗ್ರಾಹಕರಂತೆ ಗಾಂಧಿನಗರ ಸುಖ ಸಾಗರ್ ಮಾಲ್‌ನಲ್ಲಿರುವ ಅಶೋಕ ಅಪರೆಲ್ಸ್‌ಗೆ ಬಂದಿದ್ದ ಲಲಿತಾ ಅವರು ಡ್ರೆಸ್ ಕಳ್ಳತನ ಮಾಡಿದ್ದರು. ಇದನ್ನು ಗಮನಿಸಿದ ಮಳಿಗೆ ಮಾಲೀಕರು ಉಪ್ಪಾರಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಲಲಿತಾ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದರು. ಐಪಿಸಿ ಕಲಂ 380(ಕಳ್ಳತನ) ಅನ್ವಯ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಕಳುಹಿಸಿದ್ದರು. ಬಳಿಕ ಲಲಿತಾಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


