ಮಹಿಳಾ ಕೈದಿಗಳ ಸುರಕ್ಷತೆಗೆ ಕೇರಳ ಹೈಕೋರ್ಟ್ ಆದೇಶ

ಕೊಚ್ಚಿ: ಮಹಿಳಾ ಕೈದಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಅವರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಅನುಸರಿಸುವಂತೆ ಕೇರಳ ಹೈಕೋರ್ಟ್ ಪೊಲೀಸ್ ಇಲಾಖೆಗೆ ಆದೇಶ ನೀಡಿದೆ.
ರಾಜ್ಯದ ಎರವಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಯ್ಯೂರು ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಗೀತಾ ಕುಮಾರಿ ಎಂಬಾಕೆ ತನ್ನನ್ನು ಕೊಲ್ಲಂ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರುಪಡಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್‌ನ ನ್ಯಾಯಾಧೀಶರಾದ ಪಿ.ಉಬೈದ್ ಅವರು ಪೊಲೀಸರಿಗೆ ಈ ನಿರ್ದೇಶನ ನೀಡಿದರು.
ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಂದರ್ಭದಲ್ಲಿ ಕೈದಿಗಳಿಗೆ ಪೊಲೀಸ್ ಭದ್ರತೆಯನ್ನು ಒದಗಿಸುವ ಸಂಬಂಧ 2012ರಲ್ಲಿ ರಾಜ್ಯ ಸರಕಾರ ಸುತ್ತೋಲೆಯೊಂದನ್ನು ಹೊರಡಿಸಿತ್ತು. ಆದರೆ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಮಹಿಳಾ ಕೈದಿಗಳಿಗೆ ಸಮರ್ಪಕ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ತೃಶ್ಶೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿತ್‌ನಲ್ಲಿ ತಿಳಿಸಿದರು.
ಆದರೆ ಪೊಲೀಸರ ಈ ವಾದವನ್ನು ತಳ್ಳಿ ಹಾಕಿದ ನ್ಯಾಯಾಧೀಶರು ಮಹಿಳಾ ಕೈದಿಗಳಿಗೆ ರಕ್ಷಣೆ ನೀಡುವುದು ಪೊಲೀಸರ ಹೊಣೆಗಾರಿಕೆಯಾಗಿದ್ದು ಸಿಬಂದಿಗಳ ಕೊರತೆ ಇದಕ್ಕೆ ನೆಪವಾಗಲಾರದು ಎಂದು ಸ್ಪಷ್ಟಪಡಿಸಿದರಲ್ಲದೆ ಮಹಿಳಾ ಕೈದಿಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


