ದಾವೂದ್‌ನನ್ನು ಪಾಕಿಸ್ತಾನದಿಂದ ಬೇರೆಡೆ ವರ್ಗಾಯಿಸಲು ಐಎಸ್‌ಐ ಚಿಂತನೆ
ದಾವೂದ್ ಇಬ್ರಾಹಿಂನನ್ನು ಹೊರ ತಂದು ರಕ್ಷಣೆ ನೀಡುವ ನಿಟ್ಟಿನಲ್ಲಿ ಐಎಸ್‌ಐ ಪ್ರಯತ್ನ ಕೈಗೊಂಡಿರುವ...

ನವದೆಹಲಿ: ಅಫ್ಘಾನಿಸ್ತಾನ್-ಪಾಕಿಸ್ತಾನ ಗಡಿಭಾಗದಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ತಲೆಮರೆಸಿಕೊಂಡಿದ್ದು, ಅತೀ ಶೀಘ್ರದಲ್ಲಿ ಪಾಕಿಸ್ತಾನ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ಒಪ್ಪಿಸುವ ವಿಶ್ವಾಸವಿದೆ ಎಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್‌ಸಿಂಗ್ ತಿಳಿಸಿದ ಹಿನ್ನೆಲೆಯಲ್ಲಿ, ಪಾಕಿಸ್ತಾನದಿಂದ ಬೇರೆಡೆಗೆ ವರ್ಗಾಯಿಸಿ ರಕ್ಷಣೆ ಮಾಡುವ ಸಲುವಾಗಿ ಪಾಕಿಸ್ತಾನ ಗುಪ್ತಚರ ಇಲಾಖೆ ಪ್ರಯತ್ನಿಸುತ್ತಿರುವುದಾಗಿ ಮಾಹಿತಿ ಹೊರಬಿದ್ದಿದೆ.
ಈ ಹಿಂದೆ ದಾವೂದ್ ಇಬ್ರಾಹಿಂನನ್ನು ಪಾಕಿಸ್ತಾನ, ಅಫ್ಘಾನಿಸ್ತಾನ ಗಡಿಯಲ್ಲಿನ ವಸಿರಿಸ್ಥಾನದ ನಿರ್ಜನ ಪ್ರದೇಶಕ್ಕೆ ವರ್ಗಾಯಿಸಿರುವುದಾಗಿ ಮಾಹಿತಿ ತಿಳಿದುಬಂದಿತ್ತು. ಇದರಿಂದ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದರು.
ಭಾರತದ ಈ ಹೇಳಿಕೆಯಿಂದಾಗಿ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನ ಅಭದ್ರ ಸ್ಥಾನವಾಗಿದ್ದು, ಆತನನ್ನು ಪಾಕಿಸ್ತಾನದಿಂದ ಬೇರೆಡೆಗೆ ಸಾಗಿಸುವ ನಿಟ್ಟಿನಲ್ಲಿ ಐಎಸ್‌ಐ ಪ್ರಯತ್ನಿಸುತ್ತಿರುವಾಗಿ ತಿಳಿದು ಬಂದಿದೆ.
ಈ ಹಿಂದೆಯೇ ದಾವೂದ್ ಇಬ್ರಾಹಿಂನನ್ನು ಥಾಯ್‌ಲಾಂಡ್, ನೈರೋಬಿ, ಎಮಿರೇಟ್ಸ್, ಬಾಂಗ್ಲದೇಶ ಹೀಗೆ ಇತ್ಯಾದಿ ದೇಶಗಳಿಗೆ ಸಾಗಿಸುವ ಕುರಿತು ಚಿಂತನೆ ನಡೆಸಿದ್ದ ಐಎಸ್‌ಐ, ಭದ್ರತೆಗೆ ಸವಾಲೆದುರಾದ ಕಾರಣ ತಮ್ಮ ಪ್ರಯತ್ನದಿಂದ ಹಿಂದೆ ಸರಿದಿತ್ತು.
ಈ ಮಧ್ಯೆ ಕಳೆದ 20 ವರ್ಷಗಳಿಂದ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದ ದಾವೂದ್ ಇಬ್ರಾಹಿಂಗೆ ರಕ್ಷಣೆ ನೀಡುವ ಸಲುವಾಗಿ ಪ್ರತ್ಯೇಕ ಸೇನೆ ಹಾಗೂ ಐಎಸ್‌ಐನ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ದಾವೂದ್ ಇಬ್ರಾಹಿಂನನ್ನು ಹೊರ ತಂದು ರಕ್ಷಣೆ ನೀಡುವ ನಿಟ್ಟಿನಲ್ಲಿ ಐಎಸ್‌ಐ ಪ್ರಯತ್ನ ಕೈಗೊಂಡಿರುವ ಮಾಹಿತಿಯ ಕುರಿತು ಭಾರತದ ಗುಪ್ತಚರ ಬೆನ್ನತ್ತಿದೆ.
ಭಾರತದಲ್ಲಿ ಹುಟ್ಟಿದ ದಾವೂದ್ ಇಬ್ರಾಹಿಂ, ಮುಂಬೈ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಅಲ್ಲದೆ ಮಾದಕ ವಸ್ತು ಸಾಗಾಟ ಈತನ ಪ್ರಮುಖ ಕಸುಬಾಗಿದೆ. ಈತನನ್ನು ಕಳೆದ ಹಲವು ವರ್ಷಗಳಿಂದ ಒಪ್ಪಿಸುವಂತೆ ಪಾಕಿಸ್ತಾನಕ್ಕೆ ಭಾರತ ಮನವಿ ಮಾಡಿದ್ದು, ಆತ ನಮ್ಮ ದೇಶದಲ್ಲಿ ಇಲ್ಲ ಎಂದು ಪಾಕಿಸ್ತಾನ ವಾದಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


