ಲುಧಿಯಾನ ಆಸ್ಪತ್ರೆಯಲ್ಲಿ 5 ನವಜಾತ ಶಿಶುಗಳ ಸಾವು
ಪಂಜಾಬ್‌ನ ಲುಧಿಯಾನ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ...

ಚಂಡೀಗಡ: ಪಂಜಾಬ್‌ನ ಲುಧಿಯಾನ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ ಐದು ನವಜಾತ ಶಿಶುಗಳು ಸಾವನ್ನಪ್ಪಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಅಧಿಕಾರಿಗಳು ಹುಟ್ಟುವಾಗ ಹಾಗೂ ಹೆರಿಗೆ ನಂತರದ ಸಮಯದಲ್ಲಿ ಸಾವನ್ನಪ್ಪಿವೆ. ಇದಕ್ಕೆ ಆಸ್ಪತ್ರೆ ಕಾರಣವಲ್ಲ ಎಂದು ತಿಳಿಸಿದ್ದಾರೆ.
ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿರುವ ನವಜಾತ ಶಿಶುಗಳ ಪೋಷಕರು, ಘಟನೆಗೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣವಾಗಿದ್ದು, ಆಸ್ಪತ್ರೆಯಲ್ಲಿ ಸೂಕ್ತ ರೀತಿಯ ವ್ಯವಸ್ಥೆ ಇಲ್ಲ. ಹೆರಿಗೆ ಸಂದರ್ಭದಲ್ಲಿ ವೈದ್ಯರು ಧಾವಿಸದೆ ಆಸ್ಪತ್ರೆಯ ಸಿಬ್ಬಂದಿಗಳೇ ಹೆರಿಗೆ ಮಾಡಿಸಲು ಮುಂದಾದರು ಇದರಿಂದ ಶಿಶುಗಳು ಸಾವನ್ನಪ್ಪಿವೆ ಎಂದು ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಸ್ಥಳೀಯ ಪೊಲೀಸರು, ಪ್ರಕರಣ ಕುರಿತಂತೆ ಸಮಗ್ರ ವರದಿ ನೀಡುವಂತೆ ಆಸ್ಪತ್ರೆಯ ನಿರ್ದೇಶಕರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


