ಲ್ಯಾಪ್‌ಟಾಪ್ ಹಗರಣ: 300 ನ್ಯಾಯಾಧೀಶರ ವಿಚಾರಣೆ
ಲ್ಯಾಪ್‌ಟಾಪ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಕೆಳಹಂತದ ನ್ಯಾಯಾಲಯದ...

ನವದೆಹಲಿ: ಲ್ಯಾಪ್‌ಟಾಪ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಕೆಳಹಂತದ ನ್ಯಾಯಾಲಯದ 300 ನ್ಯಾಯಾಧೀಶರು ವಿಚಾರಣೆಗೆ ಒಳಪಡಲಿದ್ದಾರೆ.
2013ರಲ್ಲಿ ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್ ಖರೀದಿಗಾಗಿ ದೆಹಲಿ ಹೈಕೋರ್ಟ್ ಮತ್ತು ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಆದರೆ, ಖರೀದಿ ಮಾಡುವಾಗ ಇದರಲ್ಲಿ ಹಗರಣ ನಡೆದಿರುವುದಾಗಿ ಬೆಳಕಿಗೆ ಬಂದಿತ್ತು. ಈ ಸಂಬಂಧ ಕೆಳ ನ್ಯಾಯಾಲಯದ 300 ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್ ಖರೀದಿಯಲ್ಲಿ ನ್ಯಾಯಾಧೀಶರು ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಕುರಿತು ತನಿಖೆ ನಡೆಸಲು ಎಂದು ಹೈಕೋರ್ಟ್‌ನ ಮೂವರು ನ್ಯಾಯಾಧೀಶರನ್ನೊಳಗೊಂಡ ಉನ್ನತ ಮಟ್ಟದ ಪೀಠ ರಚಿಸಲಾಗಿದೆ.
ಯಾವ ರೀತಿಯಲ್ಲಿ ನ್ಯಾಯಾಧೀಶರು ಹಣವನ್ನು ಬಳಸಿಕೊಂಡಿದ್ದಾರೆ ಎಂದು ವಿಚಾರಣೆ ನಡೆಸಿ ವರದಿ ಸಲ್ಲಿಸಿ ಎಂದು ಪೀಠಕ್ಕೆ ಹೈಕೋರ್ಟ್‌ನ ಮುಖ್ಯನ್ಯಾಯಾಧೀಶರಾದ ಜಿ.ರೋಹಿನಿ ಸೂಚಿಸಿದ್ದಾರೆ.
ವಿಚಾರಣೆಗೆ ಅನುಕೂಲವಾಗಲೆಂದು ನ್ಯಾಯಾಧೀಶರಿಗೆ ಲ್ಯಾಪ್‌ಟಾಪ್ ಖರೀದಿಸಲು ತಲಾ ರು. 1.1 ಲಕ್ಷ ಹಣವನ್ನು ಸರ್ಕಾರ ಮತ್ತು ದೆಹಲಿ ಹೈಕೋರ್ಟ್ ಬಿಡುಗಡೆ ಮಾಡಿತ್ತು. ಆದರೆ, ಇದರಲ್ಲಿ ಹಗರಣ ನಡೆದಿದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


