ದೇಶ

ನರೇಂದ್ರ ಮೋದಿ ಮತ್ತು ನವಾಜ್ ಶರೀಫ್ ಸಭೆ ನೇಪಾಳದಲ್ಲಿ?

ಪಾಕಿಸ್ತಾನ ಪ್ರಧಾನ ಮಂತ್ರಿ ನವಾಜ್ ಶರೀಫ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ...

ನರೇಂದ್ರ ಮೋದಿ ಮತ್ತು ನವಾಜ್ ಶರೀಫ್ ಸಭೆ ನೇಪಾಳದಲ್ಲಿ?
ನವಾಜ್ ಶರೀಫ್ ಮತ್ತು ನರೇಂದ್ರ ಮೋದಿ (ಸಂಗ್ರಹ ಚಿತ್ರ)
Published On :

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನ ಮಂತ್ರಿ ನವಾಜ್ ಶರೀಫ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಈ ವಾರ ಸಾರ್ಕ್ ಶೃಂಗಸಭೆಗೆ ನೇಪಾಳ ಪ್ರವಾಸಕ್ಕೆ ತೆರಳಲಿದ್ದು ಅಲ್ಲಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಶೃಂಗ ಸಭೆಯ ಜೊತೆಜೊತೆಗೆ ಇಬ್ಬರೂ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸುವ ಸಂಭವವಿದೆ ಎಂದು ತಿಳಿದು ಬಂದಿದೆ.

"ಇಬ್ಬರೂ ಪ್ರಧಾನ ಮಂತ್ರಿಗಳು ಹೊಂದಾಣಿಕೆ ಸಮಾರಂಭದಲ್ಲಿ ಮುಖಾಮುಖಿಯಾಗಲಿದ್ದಾರೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾರ್ಕ್ ಶೃಂಗಸಭೆಯಲ್ಲಿ ಹಾಜರಾಗುವ ನಾಯಕರನ್ನು ಪದ್ಧತಿಯ ಪ್ರಕಾರ ಉದ್ಘಾಟಣೆಯ ನಂತರ ಹೊಂದಾಣಿಕೆ ಸಮಾರಂಭಕ್ಕೆ ಕರೆದೊಯ್ಯಲಾಗುತ್ತದೆ. ಇದು ನಾಯಕರಲ್ಲಿ ದ್ವಿಪಕ್ಷೀಯ ಮಾತುಕತೆಗಳಿಗೆ ಹಿತಕರ ವಾತಾವರಣವನ್ನು ನಿನಿರ್ಮಿಸಲು ಸಹಕಾರಿಯಾಗುತ್ತದೆ.

ಶರೀಫ್ ಅವರು ಸಾರ್ಕ್ ದೇಶದ ರಾಷ್ಟ್ರ ನಾಯಕರನ್ನು ಭೇಟಿ ಮಾಡಿ ದಿಪಕ್ಷೀಯ ಸಂಬಂಧಗಳನ್ನು ಚರ್ಚಿಸುತ್ತಾರೆ ಎಂದು ವಿದೇಶಿ ವ್ಯವಹಾರಗಳ ಕಚೇರಿ ತಿಳಿಸಿದೆ.

ಆದರೆ ಈ ದ್ವಿಪಕ್ಷೀಯ ಮಾತುಕತೆಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಮಾತುಕತೆ ನಡೆಸಲಾಗುವುದೇ ಎಂಬುದನ್ನು ಸ್ಪಷ್ಟೀಕರಿಸಿಲ್ಲ.

ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಯನ್ನು ಸಂಪರ್ಕಿಸಿದಾಗ, ಭಾರತದ ಕಡೆಯಿಂದ ಅಂತಹ ಯಾವುದೇ ಭೇಟಿಗೆ ಆಹ್ವಾನ ಬಂದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.