ಸಂಸತ್ ಅಧಿವೇಶನ ನಾಳೆಗೆ ಮುಂದೂಡಿಕೆ
ವಿಮಾ ಮಸೂದೆ, ಕಪ್ಪು ಹಣ ವಾಪಸ್ ತರುವ ವಿಚಾರ ಸೇರಿದಂತೆ ಹಲವು ವಿಷಯಗಳ ವಿರುದ್ಧ ಧ್ವನಿ...

ನವದೆಹಲಿ: ಸಂತಾಪ ಸೂಚನೆಯ ಬಳಿಕ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಇತ್ತ ವಿರೋಧ ಪಕ್ಷಗಳು ಮುಂದಾಗಿದ್ದು, ವಿಮಾ ಮಸೂದೆ, ಕಪ್ಪು ಹಣ ವಾಪಸ್ ತರುವ ವಿಚಾರ ಸೇರಿದಂತೆ ಹಲವು ವಿಷಯಗಳ ವಿರುದ್ಧ ಧ್ವನಿ ಎಬ್ಬಿಸುವ ಸಾಧ್ಯತೆಗಳಿವೆ.
ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಡಿಸೆಂಬರ್ 23ನೇ ತಾರೀಖಿನವರೆಗೆ ನಡೆಯಲಿದೆ.
ನೂತವಾಗಿ ರಚನೆಯಾಗಿರುವ ಬಿಜೆಪಿ ಸರ್ಕಾರದ ಮೊದಲ ಚಳಿಗಾಲದ ಅಧಿವೇಶನ ಇದಾಗಿದ್ದು, ಪ್ರಮುಖ ಮಸೂದೆಗಳು ಜಾರಿಗೆ ಬರುವ ಸಾಧ್ಯತೆಗಳಿವೆ.
ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷೆ ಸಭೆಯನ್ನು ಕರೆಸಿ, ಚಳಿಗಾಲದ ಅಧಿವೇಶನ ಸುಗಮವಾಗಿ ನಡೆಸಿಕೊಡಲು ಮನವಿ ಮಾಡಿದ್ದರು.
ಇಂದು ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಉಭಯ ಸದನಗಳಲ್ಲಿ ಕಾಂಗ್ರೆಸ್ ನಾಯಕ ಮುರಳಿ ಡೋರ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ವ್ಯಕ್ತಪಡಿಸಲಾಯಿತು.
ಸಂತಾಪ ಸೂಚನೆಯ ಬಳಿಕ ಲೋಕ ಸಭೆಯಲ್ಲಿ ಗೋಪಿನಾಥ್ ಮುಂಡೆ ಅವರ ಪುತ್ರಿ ಪ್ರೀತಮ್ ಮುಂಡೆ ಸೇರಿದಂತೆ ಇತರೆ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.
ಬಳಿಕ ಪ್ರಧಾನಿ ನರೇಂದ್ರ ಮೋದಿ, ನೂತನವಾಗಿ ನೇಮಕಗೊಂಡ ಸಚಿವರನ್ನು ಪರಿಚಯ ಮಾಡಿಸಿದರು. ಈ ಬಳಿಕ ಲೋಕ ಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
ಇತ್ತ ರಾಜ್ಯಸಭೆಯ ಸಭಾಪತಿ ಹಮೀದ್ ಅನ್ಸಾರಿ ಮೂಲಕ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ವ್ಯಕ್ತಪಡಿಸಲಾಯಿತು. ಕಾಂಗ್ರೆಸ್ ನಾಯಕ ಮುರಳಿ ಡೋರಾ, ಪ್ರಸಿದ್ದ ಯೋಗಾ ಪಟು ಬಿಕೆಎಸ್ ಅಯ್ಯಂಗಾರ್, ಮಾಜಿ ರಾಜ್ಯ ಸಭಾ ಸದಸ್ಯರಾದ ಲೇಖ್‌ರಾಜ್ ಬಚನಿ, ಜಗದೇವ್ ಸಿಂಗ್ ತಲ್ವಾಂದಿ ಮತ್ತು ಎಸ್‌ಎಸ್ ರಾಜೇಂದ್ರನ್ ಸೇರಿದಂತೆ ಹಲವು ರಂಗದ ಗಣ್ಯರಿಗೆ ಸಂತಾಪ ವ್ಯಕ್ತಪಡಿಸಲಾಯಿತು.
ಸಂತಾಪ ಸೂಚನೆಯ ಬಳಿಕ ರಾಜ್ಯ ಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


