ದೇಶ

ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ

ಇದರಿಂದ ತಪ್ಪಿಸಿಕೊಳ್ಳಲು ಬಾಲಕಿ ಯುವಕರ ವಿರುದ್ದ ಹೋರಾಟ ನಡೆಸಿದ್ದಾಳೆ...

ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ
Published On :

ಬರೇಲಿ: ಉತ್ತರ ಪ್ರದೇಶದಲ್ಲಿ ಮನೆಯಲ್ಲಿ ಒಂಟಿಯಾಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲು ಮುಂದಾಗ 6 ಯುವಕರ ಗುಂಪೊಂದು ಅತ್ಯಾಚಾರಕ್ಕೆ ಅವಕಾಶ ಕೊಡದ ಹಿನ್ನೆಲೆಯಲ್ಲಿ ಬಾಲಿಕಯನ್ನು ಸೀಮೆಎಣ್ಣೆ ಸುರಿದು ಹತ್ಯೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದಲ್ಲಿ ನಡೆದಿದೆ.

ಬರೇಲಿ ಪ್ರದೇಶದ ಶಾಜಹಾನ್‌ಪುರದಲ್ಲಿ ಈ ಬಾಲಕಿ ಕಳೆದ 17ನೇ ತಾರೀಖಿನಿಂದ ಒಂಟಿಯಾಗಿದ್ದಳು. ಇದೇ ಸಂದರ್ಭದಲ್ಲಿ ಅದೇ ಗ್ರಾಮದ ನಿವಾಸಿಗಳಾದ 6 ಜನರ ಯುವಕರ ಗುಂಪೊಂದು ಮನೆಗೆ ನುಗ್ಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿತ್ತು. ಇದರಿಂದ ತಪ್ಪಿಸಿಕೊಳ್ಳಲು ಬಾಲಕಿ ಯುವಕರ ವಿರುದ್ದ ಹೋರಾಟ ನಡೆಸಿದ್ದಾಳೆ. ಈ ವೇಳೆ ಕುಪಿತಗೊಂಡ ಯುವಕರ ಗುಂಪು, ಮನೆಯಲ್ಲಿದ್ದ ಸೀಮೆಎಣ್ಣೆಯನ್ನು ಬಾಲಕಿಯ ಮೇಲೆ ಸುರಿದು ಬೆಂಕಿ ಇಟ್ಟು ಪರಾರಿಯಾಗಿದ್ದರು.

ಬಾಲಕಿಯ ಕಿರುಚಾಟವನ್ನು ಕೇಳಿಸಿಕೊಂಡ ಸ್ಥಳೀಯರು ಕೂಡಲೇ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಸುಟ್ಟ ಗಾಯಗಳಿಂದ ಬಳಲಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬರೇಲಿಯಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬಾಲಕಿಯ ಸ್ಥಿತಿ ಮತ್ತಷ್ಟು ಗಂಭೀರವಾಗತೊಡಗಿತ್ತು. ನಂತರ ಆಕೆಯನ್ನು ರೊಹಿಲ್‌ಕಂತ್ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆಯಲ್ಲಿ ಕಳೆದ ಭಾನುವಾರ ಬಾಲಕಿ ಸಾವನ್ನಪ್ಪಿದ್ದಳು.

ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತು. ಈ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯ ಬಳಿಕ ತಲೆಮರೆಸಿಕೊಂಡಿರುವ ಇನ್ನುಳಿದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಜಾಲಾ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.