ಪ್ರಧಾನಿ ಮೋದಿ ಭೇಟಿಗೂ ಮುನ್ನ ಮಣಿಪುರದಲ್ಲಿ ಸ್ಫೋಟ: ಓರ್ವ ಸಾವು

ಥೌಬಾಲ್(ಮಣಿಪುರ): ಮಣಿಪುರದ ಥೌಬಾಲ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದಾನೆ.
ಮಣಿಪುರದ ಗುವಾಹಟಿಯಲ್ಲಿನ ಯೋಜನೆಯೊಂದರ ಉದ್ಘಾಟನಾ ಕಾರ್ಯಕ್ರಮವನ್ನು ಭಾನುವಾರ ಮಧ್ಯಾಹ್ನ ನಡೆಯಲಿದ್ದು, ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೆರಳಬೇಕಿತ್ತು. ಇದಕ್ಕೂ ಮೊದಲೇ ಮಣಿಪುರದ ಥೌಬಾಲ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಭಯೋತ್ಪಾದಕರ ಹಿಟ್ ಲಿಸ್ಟ್‌ನಲ್ಲಿ ಮೋದಿ ಅವರ ಹೆಸರು ಮುಂಚೂಣಿಯಲ್ಲಿದ್ದು, ಮೋದಿ ಅವರ ಸಭೆ ಸಮಾರಂಭಗಳ ವೇಳೆ ಉತ್ತರ ಭಾರತದ ಕೆಲವೆಡೆ ಬಾಂಬ್ ಸ್ಫೋಟಗಳೂ ನಡೆದಿವೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲು ನಿನ್ನೆ ಜಮ್ಮುವಿಗೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಉಗ್ರರು ಅರ್ನಿಯಾ ಎಂಬಲ್ಲಿ ಗುಂಡಿನ ದಾಳಿ ನಡೆಸಿ, ಮೂವರು ಯೋಧರು ಸೇರಿದಂತೆ ಐವರು ನಾಗರಿಕರನ್ನು ಹತ್ಯೆ ಮಾಡಿದ್ದರು. ಇದೇ ವೇಳೆ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರರನ್ನು ಸೇನೆ ಸದೆಬಡಿದ್ದಿತ್ತು.
ಮತ್ತೊಂದೆಡೆ ಪ್ರಧಾನಿ ಮೋದಿ ಜಮ್ಮುವಿಗೆ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಗಡಿಯಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


