ವಿದ್ಯಾರ್ಥಿನಿಗೆ ಚುಡಾಯಿಸಿದಕ್ಕೆ ಆಕ್ಷೇಪ: ಕಿರಿಯ ವಿದ್ಯಾರ್ಥಿ ಕೊಂದ ಹಿರಿಯ ವಿದ್ಯಾರ್ಥಿ

ಹೈದರಾಬಾದ್: ಸಹ ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಿರಿಯ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿ ಥಳಿಸಿದ್ದು ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಹೈದರಾಬಾದ್ನ ಪ್ರಗತಿ ಮಹಾವಿದ್ಯಾಲಯ ಕಾಲೇಜ್‌ನಲ್ಲಿ ಬಿ.ಕಾಂ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷವರ್ಧನ್ ರಾವ್ ಎಂಬಾತ ಹಿರಿಯ ವಿದ್ಯಾರ್ಥಿ ಸತೀಶ್ ಕೊಡ್ಕರ್ ಕ್ರೌರ್ಯಕ್ಕೆ ಬಲಿಯಾಗಿದ್ದಾನೆ.
ಸತೀಶ್ ಕೊಡ್ಕರ್ ವಿದ್ಯಾರ್ಥಿನಿಯೊಬ್ಬಳನ್ನು ಚುಡಾಯಿಸುತ್ತಿದ್ದ ವೇಳೆ ಹರ್ಷವರ್ಧನ್ ಆಕ್ಷೇಪ ವ್ಯಕ್ತಪಡಿಸಿದ್ದ ಇದರಿಂದ ರೊಚ್ಚಿಗೆದ್ದ ಸತೀಶ್ ಕ್ಲಾಸ್‌ರೂಂನೊಳಗೆ ನುಗ್ಗಿ ಹರ್ಷವರ್ಧನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ.
ಹಿರಿಯ ವಿದ್ಯಾರ್ಥಿ, ಹರ್ಷವರ್ಧನ್ ಇದ್ದ ತರಗತಿಗೆ ನುಗ್ಗಿ ಆತನ ಮುಖ ಹಾಗು ಎದೆಯ ಭಾಗಕ್ಕೆ ಗುದ್ದಿದ ಇದರಿಂದ ಹರ್ಷವರ್ಧನ್ ಪ್ರಜ್ಞಾ ಹೀನನಾದ ಎಂದು ಪ್ರತ್ಯಕ್ಷದರ್ಶಿ ಹಾಗೂ ಸಹೋದರ ತ್ರಿಭುವನ್ ಹೇಳಿದ್ದಾನೆ.
ಈ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಕಿರಿಯ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸುವುದು ಹಾಗೂ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಕಾಲೇಜು ಆಡಳಿತ ಮಂಡಳಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ತ್ರಿಭುವನ್ ಹೇಳಿದ್ದಾನೆ.
ಹರ್ಷವರ್ಧನ್ ಮೇಲೆ ಹಲ್ಲೆ ನಡೆಸಿದ ಬಳಿಕವೂ ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಆತನನ್ನು ಕೂಡಲೇ ಹೈದರಾಬಾದ್‌ನ ಆದಿತ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರವಾಗಿ ಹಲ್ಲೆಗೊಳಗಾಗಿದ್ದರಿಂದ ಹರ್ಷವರ್ಧನನ್ನು ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತನಿಖಾಧಿಕಾರಿ ಜಿ. ಶ್ರೀನಿವಾಸ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


