ದೇಶ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಸುಮಾರು 25 ಸುತ್ತು ಗುಂಡು ಹಾರಿಸಿದೆ.

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
ಪಾಕಿಸ್ತಾನ ಪಡೆಗಳಿಗೆ ದಿಟ್ಟ ಉತ್ತರ ನೀಡುವುದರಲ್ಲಿ ಮಗ್ನಾರಾಗಿರುವ ಭಾರತೀಯ ಯೋಧರು
Published On :

ಶ್ರೀನಗರ: ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಸುಮಾರು 25 ಸುತ್ತು ಗುಂಡು ಹಾರಿಸಿದೆ.

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರಿನಲ್ಲಿ ಪಾಕಿಸ್ತಾನಿ ಪಡೆಗಳು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ನಿರಂತರ ಗುಂಡಿನ ದಾಳಿ ನಡೆಸಿದ್ದಾರೆ. ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನ ಯೋಧರು ಇಂದು ನಿರಂತರ ಒಂದೂ ಮುಕ್ಕಾಲು ಗಂಟೆ ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರು 11 ಗಂಟೆಯ ಸುಮಾರಿನಲ್ಲಿ ಗುಂಡಿನ ದಾಳಿ 12.45ರ ಸುಮಾರಿನಲ್ಲಿ ನಿಂತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಸಾಂಬಾ ಸೆಕ್ಟರಿನ ಭಾರತೀಯ ಗಡಿಯಲ್ಲಿ ನಮ್ಮ ಯೋಧರು ನಿರ್ಮಿಸುತ್ತಿರುವ ನಿರ್ಮಾಣ ಕಾಮಗಾರಿಯನ್ನು ಗುರಿಯಾಗಿಸಿಕೊಂಡೇ ಪಾಕ್ ಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವೊಬ್ಬ ಭಾರತೀಯ ಯೋಧನಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಪಾಕ್ ಸೇನೆಯ ಉದ್ಧಟತನಕ್ಕೆ ಭಾರತೀಯ ಯೋಧರು ತಿರುಗೇಟು ನೀಡಿದ್ದು, ಪಾಕ್ ಪಡೆಗಳತ್ತ ಗುಂಡಿನ ದಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಚಳಿಯಿಂದ ರಕ್ಷಣೆ ಪಡೆಯಲು ಮತ್ತು ಗಡಿಯನ್ನು ನಿರಂತರವಾಗಿ ಕಾಯುವ ಉದ್ದೇಶದಿಂದ ಭಾರತೀಯ ಗಡಿಯಲ್ಲಿ ಭಾರತೀಯ ಸೇನೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ಇದು ಪಾಕಿಸ್ತಾನಿ ಪಡೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಇದನ್ನು ನಿಲ್ಲಿಸುವ ಉದ್ದೇಶದಿಂದಲೇ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.