ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ನಾಲ್ವರ ಸಾವು

ಕಂಜಾವಲಾ(ನವದೆಹಲಿ): ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ದೆಹಲಿಯಲ್ಲಿ ಸಂಭವಿಸಿದೆ.
ನವದೆಹಲಿಯ ಕಂಜಾವಲಾ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರವೊಂದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ 10 ಮಂದಿಯ ಪೈಕಿ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ಉಳಿದಂತೆ 6 ಮಂದಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ನವದೆಹಲಿ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


