ಜೋಡಿ ಕೊಲೆ ಮಾಡಿದ್ದ ರೌಡಿ ಹತ್ಯೆ
ಜೋಡಿ ಕೊಲೆ ಆರೋಪದಲ್ಲಿ ಬಂಧನಕ್ಕೀಡಾಗಿ ಪೆರೋಲ್ ಮೇಲೆ ಹೊರ ಬಂದಿದ್ದ ರೌಡಿಯೊಬ್ಬನನ್ನು ದುಷ್ಕರ್ಮಿಗಳು ಕೊಂದು ಹಾಕಿದ್ದಾರೆ.

ಬಳ್ಳಾರಿ: ಜೋಡಿ ಕೊಲೆ ಆರೋಪದಲ್ಲಿ ಬಂಧನಕ್ಕೀಡಾಗಿ ಪೆರೋಲ್ ಮೇಲೆ ಹೊರ ಬಂದಿದ್ದ ರೌಡಿಯೊಬ್ಬನನ್ನು ದುಷ್ಕರ್ಮಿಗಳು ಕೊಂದು ಹಾಕಿದ್ದಾರೆ.
ಬಳ್ಳಾರಿ ಗುರು ಕಾಲೋನಿಯ ನಿವಾಸಿ ಉರಕುಂದ ಎಂಬ ರೌಡಿಯನ್ನು ಬಳ್ಳಾರಿಯ ರೇಲ್ವೇ ನಿಲ್ದಾಣದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಗಾಂಧಿನಗರ ಪೊಲೀಸರು ಪರಿಶೀಲನೆ ಮಾಡಿದ್ದು, ರೌಡಿ ಉರಕುಂದನ ಮೃತದೇಹವನ್ನು ಮರೋಣತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
2009ರಲ್ಲಿ ಬಳ್ಳಾರಿ ನಗರದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣ ಸಂಬಂಧ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ರೌಡಿ ಉರಕುಂದನನ್ನು ಬಂಧಿಸಿದ್ದ ಪೊಲೀಸರು ಉರಕುಂದನನ್ನು ಬಂಧಿಸಿ ನ್ಯಾಯಾಲಯದಲ್ಲಿ ಹಾಜರು ಪಡಿಸಿದ್ದರು.
ಈ ಸಂಬಂಧ ರೌಡಿ ಉರಕುಂದನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹೀಗಾಗಿ ಈವರೆಗೂ ರೌಡಿ ಉರಕುಂದ ಬಳ್ಳಾರಿ ಜೈಲಿನಲ್ಲಿದ್ದ. ಆದರೆ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ರೌಡಿ ಉರಕುಂದ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದ.
ಅಲ್ಲದೆ ಇತ್ತೀಚೆಗಷ್ಟೇ ಆತ ಪೆರೋಲ್ ಮೇಲೆ ಹೊರಬಂದಿದ್ದ ರೌಡಿ ಉರಕುಂದ ಧಾರವಾಡ ಹೈಕೋರ್ಟ್‌ಗೆ ತೆರಳುವ ವೇಳೆ ದುಷ್ಕರ್ಮಿಗಳು ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


