ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ: ಓರ್ವ ಪೊಲೀಸ್ ಸಿಬ್ಬಂದಿ ಸಾವು
ಜಮ್ಮು ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಮತ್ತೇ ಗುಂಡಿನ ದಾಳಿ ನಡೆದಿದ್ದು, ಮನೆಯೊಂದರಲ್ಲಿ ಅಡಗಿರುವ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಶ್ರೀನಗರ: ಜಮ್ಮು ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ನಡೆಯುತ್ತಿರುವ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ.
ಉತ್ತರ ಕಾಶ್ಮೀರ ಪಾಂತ್ಯದ ತಂಗ್ ಮಾರ್ಗ್ ದ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದು, ಉಗ್ರರ ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ಬಾರಿ ಗುಂಡಿನ ಕಾಳಗ ನಡೆಯುತ್ತಿದೆ. ಈ ವೇಳೆ ಉಗ್ರರ ಗುಂಡೇಟಿಗೆ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿಯ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಕಟ್ಟಡವೊಂದರಲ್ಲಿ ಅಡಗಿರುವ ಉಗ್ರರನ್ನು ದಮನಕ್ಕೆ ಭದ್ರತಾ ಸಿಬ್ಬಂದಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಉಗ್ರರು ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಶಂಕೆಯನ್ನು ಭದ್ರತಾ ಪಡೆ ಸಿಬ್ಬಂದಿಗಳು ವ್ಯಕ್ತಪಡಿಸಿದ್ದಾರೆ.
ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು ಉಗ್ರರು ಅಡಗಿ ಕುಳಿತಿರುವ ಮನೆಯನ್ನು ಸುತ್ತುವರೆದಿದ್ದು, ಉಗ್ರರ ದಮನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


