ದೇಶ

ಸೋನಿಯಾ ವಿರುದ್ಧ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಗಿರಿರಾಜ್ ಸಿಂಗ್

ನನ್ನ ಹೇಳಿಕೆಯಿಂದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ನೋವಾಗಿದ್ದರೆ, ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ...

ಸೋನಿಯಾ ವಿರುದ್ಧ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಗಿರಿರಾಜ್ ಸಿಂಗ್
ಬಿಜೆಪಿ ಸಂಸದ ಗಿರಿರಾಜ್ ಸಿಂಗ್
Published On :

ನವದೆಹಲಿ: ನನ್ನ ಹೇಳಿಕೆಯಿಂದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ನೋವಾಗಿದ್ದರೆ, ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ್ದ ಗಿರಿರಾಜ್ ಸಿಂಗ್, ರಾಜೀವ್ ಗಾಂಧಿ ಅವರು ನೈಜೀರಿಯಾಗೆ ಸೇರಿದ ಹೆಣ್ಣು ಮಗಳನ್ನು ಮದುವೆಯಾಗಿದ್ದರೆ, ಆ ಹೆಣ್ಣು ಮಗಳು ಬೆಳ್ಳಗಿರದಿದ್ದರೆ ಆಕೆಗೆ ಕಾಂಗ್ರೆಸ್ ಪಕ್ಷ ಅಧ್ಯಕ್ಷೆ ಸ್ಥಾನ ನೀಡುತ್ತಿತ್ತೇ? ಎಂದು ಹೇಳುವ ಮೂಲಕ ಹೊಸ ವಿವಾದವೊಂದನ್ನು ಗಿರಿರಾಜ್ ಸೃಷ್ಟಿಸಿದ್ದರು. ಗಿರಿರಾಜ್ ಅವರ ಈ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ವಿರೋಧಕ್ಕೆ ವ್ಯಕ್ತವಾಗಿತ್ತಲ್ಲದೆ, ರಸ್ತೆಗಳಲ್ಲಿ ಪ್ರತಿಭಟನೆಗಿಳಿದು ಗಿರಿರಾಜ್ ಕ್ಷಮಾಪಣೆ ಕೋರುವಂತೆ ಆಗ್ರಹಿಸಿತ್ತು.

ತಮ್ಮ ವಿವಾದತ್ಮಕ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡುವಂತೆ ಬಿಜೆಪಿ ಪಕ್ಷವೂ ಗಿರಿರಾಜ್ ಸಿಂಗ್ ಅವರನ್ನು ಕೇಳಿತ್ತು. ಪಕ್ಷದ ಸೂಚನೆಯಂತೆ ಇಂದು ಗಿರಿರಾಜ್ ಅವರು ಸ್ಪಷ್ಟನೆ ನೀಡಿದ್ದಾರೆ. ಆದ್ದರಿಂದ ವಿವಾದ ಮುಕ್ತಾಯವಾಗಿದೆ ಎಂದು ಬಿಜೆಪಿ ಹೇಳಿದೆ.

ತಮ್ಮ ವಿವಾದಾತ್ಮಕ ಹೇಳಿಕೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಗಿರಿರಾಜ್ ಅವರು, ಮಾದ್ಯಮಗಳೊಂದಿಗೆ ಮಾತನಾಡುವಾಗ ಹಲವು ರೀತಿಯ ವಿಷಯಗಳನ್ನು ಮಾತನಾಡಲಾಯಿತು. ಹೀಗೆ ಮಾತನಾಡುವಾಗ ವರ್ಣದ ಕುರಿತಂತೆ ಮಾತು ಬಂತು. ಆ ಸಂದರ್ಭದಲ್ಲಿ ಈ ರೀತಿಯ ಮಾತುಗಳನ್ನು ಹೇಳುವ ಸಂದರ್ಭ ಎದುರಾಯಿತು. ನನ್ನ ಹೇಳಿಕೆಯಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೇನಾದರೂ ಬೇಸರ ಅಥವಾ ನೋವುಂಟಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.