ಲಾಲ್ ಮಸೀದಿ ಪ್ರಕರಣ: ಪರ್ವೇಜ್ ಮುಷರಫ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯವು...

ಇಸ್ಲಾಮಾಬಾದ್: ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಪ್ರಕರಣ ಕುರಿತಂತೆ ಇಂದು ವಿಚಾರಣೆ ನಡೆಸಿದ ಇಸ್ಲಾಮಾಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ವಿಚಾರಣಾ ಹಾಜರಾತಿ ವಿನಾಯಿತಿ ಕುರಿತಂತೆ ಮುಷರಫ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದು, ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಅಲ್ಲದೆ, ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಿದೆ.
ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಹೆಸರು ಕೇಳಿಬಂದಿತ್ತು. ಇದರಂತೆ ಪೊಲೀಸರು ಪರ್ವೇಜ್ ಮುಷರಫ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಆರೋಗ್ಯ ಹಾಗೂ ಭದ್ರತೆಗಳ ನೆಪ ಹೂಡತ್ತಲೇ ನ್ಯಾಯಾಲಯದಿಂದ ವಿನಾಯಿತಿ ಪಡೆದು ವಿಚಾರಣೆಗೆ ಪರ್ವೇಜ್ ಮುಷರಫ್ ಹಾಜರಾಗುತ್ತಿರಲಿಲ್ಲ. ಹಾಗಾಗಿ ಪರ್ವೇಜ್ ಮುಷರಫ್ ಅವರ ಈ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಮುಷರಫ್ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


