ರಷ್ಯಾ: ಹಡಗು ಮುಳುಗಿ 54 ಮಂದಿ ಜಲಸಮಾಧಿ
ರಷ್ಯಾದ ಒಕೊಹೊಟಸ್ಕ್ ಸಾಗರದಲ್ಲಿ ಪ್ರಯಾಣಿಕ ಹಡಗೊಂದು ಮುಳುಗಿ ಸುಮಾರು 54 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಮಾಸ್ಕೊ: ರಷ್ಯಾದ ಒಕೊಹೊಟಸ್ಕ್ ಸಾಗರದಲ್ಲಿ ಪ್ರಯಾಣಿಕ ಹಡಗೊಂದು ಮುಳುಗಿ ಸುಮಾರು 54 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಬುಧವಾರ ರಾತ್ರಿ ರಷ್ಯಾದ ಕಮಚಟ್ಕಾ ಪನಿನ್ಸುಲಾ ಕರಾವಳಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಆದರೆ ಘಟನಾ ಸ್ಥಳದಲ್ಲಿ ಸಮುದ್ರದ ನೀರು ಸಂಪೂರ್ಣವಾಗಿ ಹಿಮಗಟ್ಟಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ದುರಂತಕ್ಕೀಡಾದ ಡಾಲ್ನಿ ವೊಸ್ಕೊಟ್ ನೌಕೆಯಲ್ಲಿ ಲಾಟ್ವಿಯಾ, ಉಕ್ರೇನ್, ಮ್ಯಾನ್ಮಾರ್ ದೇಶಗಳ ಒಟ್ಟು 132 ನೌಕಾ ಸಿಬ್ಬಂದಿ ಇದ್ದು, ಇದುವರೆಗೆ 63 ಮಂದಿಯನ್ನು ರಕ್ಷಿಸಲಾಗಿದೆ. ಇನ್ನುಳಿದವರಿಗಾಗಿ ಸಾಗರದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಸಮುದ್ರದಲ್ಲಿ ಮುಳುಗಿರುವ ನೌಕೆಯನ್ನು ಇದುವರೆಗೆ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಘಟನೆಗೆ ಕಾರಣವೇನು ಎನ್ನುವುದೂ ಪತ್ತೆಯಾಗಿಲ್ಲ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ರಕ್ಷಿಸಲಾದ ಸಿಬ್ಬಂದಿಯನ್ನು ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು 25ಕ್ಕೂ ಹೆಚ್ಚು ಮೀನುಗಾರಿಕಾ ಬೋಟುಗಳ ನೆರವು ಪಡೆಯಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


