ಗನ್ ತೋರಿಸಿ 2 ಅಪ್ರಾಪ್ತರ ಮೇಲೆ 5 ಕಾಮುಕರಿಂದ ಗ್ಯಾಂಗ್ ರೇಪ್
ಉತ್ತರಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಸರಣಿಗಳು ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಐವರು ಯುವಕರು ಬಂದೂಕು ತೋರಿಸಿ...

ಬದೌನ್(ಉತ್ತರಪ್ರದೇಶ): ಉತ್ತರಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಸರಣಿಗಳು ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಐವರು ಯುವಕರು ಬಂದೂಕು ತೋರಿಸಿ ಅಪ್ರಾಪ್ತ ವಯಸ್ಸಿನ ಇಬ್ಬರು ಸೋದರ ಸಂಬಂಧಿ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬದೌನ್ ನಿಂದ ವರದಿಯಾಗಿದೆ.
ಕಳೆದ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದ ಇಬ್ಬರು ಬಾಲಕಿಯರನ್ನು ಅಪಹರಿಸಿ ನಂತರ ಬಂದೂಕು ತೋರಿಸಿ ಐವರು ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಬಾಲಕಿಯರು ಕಿರುಚಾಡಿದಾಗ ಸ್ಥಳಕ್ಕೆ ಧಾವಿಸಿ ಬಂದ ಗ್ರಾಮಸ್ಥರು ಅತ್ಯಾಚಾರಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಅತ್ಯಾಚಾರಿಗಳಲ್ಲಿ ಇಬ್ಬರು ಸಹೋದರರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಸುಪರಿಂಟೆಂಡೆಂಟ್ ಸೌಮಿತ್ರ ಯಾದವ್ ತಿಳಿಸಿದ್ದಾರೆ.
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅತ್ಯಾಚಾರಕ್ಕೆ ಗುರಿಯಾದ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಕಳೆದ ವರ್ಷ ಮೇ 27ರಂದು ಬದಾಂವ್‌ನಲ್ಲಿ 14 ಮತ್ತು 15 ವರ್ಷ ಪ್ರಾಯದ ಇಬ್ಬರ ಸೋದರ ಸಂಬಂಧಿ ಬಾಲಕಿಯರು ನಾಪತ್ತೆಯಾಗಿ ಬಳಿಕ ಅವರ ಮೃತ ದೇಹಗಳು ಮರದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದವು. ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಬಾಲಕಿಯರನ್ನು ಕೊಲೆ ಮಾಡಿಲ್ಲ. ಅವರ ಮೇಲೆ ಸಾಮೂಹಿಕ ಅತ್ಯಾಚಾರ ಕೂಡ ನಡೆದಿಲ್ಲ ಬಾಲಕಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತನ್ನ ವರದಿಯಲ್ಲಿ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


