ಅಪ್ರಾಪ್ತೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ
ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಪಡ ಪೊಲೀಸರು ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ...

ಥಾಣೆ: ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಪಡ ಪೊಲೀಸರು ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ.
ಅಜ್ಮದ್ (20) ಮತ್ತು ಫರ್ಷಿದ್ (22) ಬಂಧಿತ ಆರೋಪಿಗಳು. ಡಾಂಬಿವಲಿಯ ಕಲ್ಯಾಣ ವಿಭಾಗ ಪ್ರದೇಶದಲ್ಲಿ ಕಟ್ಟಡ ನಿರ್ಮಾಣವೊಂದರಲ್ಲಿ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಈ ಇಬ್ಬರು ಆರೋಪಿಗಳು ಕಟ್ಟಡ ನಿರ್ಮಾಣದ ಬಳಿಯ ಮನೆಯಲ್ಲಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದಾರೆ. ನಂತರ ನಿರ್ಜನ ಪ್ರದೇಶಕ್ಕೆ ಬಾಲಕಿಯನ್ನು ಕರೆದೊಯ್ದ ಕಾಮುಕರು ಬಾಲಕಿಯ ಮೇಲೆ ಅತ್ಯಾಚಾರವೆಸಗಿ ನಂತರ ಸ್ಥಳದಿಂದ ಕಾಲ್ಕಿತ್ತಿದ್ದರು.
ಮನೆಗೆ ಬಂದ ಬಾಲಕಿ ಪೋಷಕರೊಂದಿಗೆ ನಡೆದ ಸಂಗತಿಯನ್ನು ವಿವರಿಸಿ ಹೇಳಿದ್ದಳು. ಗಾಬರಿಗೊಂಡ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು ತಲೆಮರೆಸಿಕೊಂಡಿದ್ದ ಅಜ್ಮದ್ ಹಾಗೂ ಫರ್ಶೀದ್ ಎಂಬ ಆರೋಪಿಗಳನ್ನು ಇಂದು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳ ವಿರುದ್ದ ಐಪಿಸಿ ಸೆಕ್ಷನ್ ಪ್ರಕಾರ ಅಪಹರಣ, ಕ್ರಿಮಿನಲ್ ಬೆದರಿಕೆ, ಲೈಂಗಿಕ ಅಪರಾಧ (ಪೋಸ್ಕೋ ಕಾಯ್ದೆ), ಮಕ್ಕಳ ರಕ್ಷಣಾ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ನಿಲೇಶ್ ಪಾಟೀಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


