ಸ್ಮೃತಿ ಇರಾನಿ ಟ್ರಯಲ್ ರೂಂ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಗೋವಾ ಸಿಎಂ
ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರು ಟ್ರಯಲ್ ರೂಂನಲ್ಲಿ ರಹಸ್ಯೆ ಕ್ಯಾಮೆರಾ ಪತ್ತೆ ಹಚ್ಚಿದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಗೋವಾ ಮುಖ್ಯಮಂತ್ರಿ...

ಬೆಂಗಳೂರು/ಪಣಜಿ: ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರು ಟ್ರಯಲ್ ರೂಂನಲ್ಲಿ ರಹಸ್ಯೆ ಕ್ಯಾಮೆರಾ ಪತ್ತೆ ಹಚ್ಚಿದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಘಟನೆ ಕುರಿತು ಆಘಾತ ವ್ಯಕ್ತಪಡಿಸಿದ್ದ ಪರ್ಸೇಕರ್ ಅವರು, ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿದ್ದಾರೆ ಎಂದು ವರದಿಗಳು ತಿಳಿಸಿವೆ. ಪರ್ಸೇಕರ್ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಿಮಿತ್ತ ಸದ್ಯ ಬೆಂಗಳೂರಿನಲ್ಲಿದ್ದಾರೆ.
ಪ್ರಕರಣ ಸಂಬಂಧ ಗೋವಾ ಅಪರಾಧ ವಿಭಾಗದ ಪೊಲೀಸರು ಶನಿವಾರ ಫ್ಯಾಬ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿಲಿಯಂ ಬಿಸೆಲ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
'ಫ್ಯಾಬ್ ಇಂಡಿಯಾದ ಎಲ್ಲಾ ಹಿರಿಯ ಅಧಿಕಾರಿಗಳನ್ನು ನಾವು ವಿಚಾರಣೆ ನಡೆಸುತ್ತೇವೆ' ಎಂದು ಅಪರಾಧ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ಕಷ್ಯಪ್ ಅವರು ಹೇಳಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದಿರುವ ಗೋವಾ ಪೊಲೀಸರು, ಅವರಿಂದ ಕೆಲವು ಆಕ್ಷೇಪಾರ್ಹ ಪೋಟೋಗಳನ್ನು ಮತ್ತು ಸಿಸಿಟಿವಿ ಕ್ಯಾಮೆರಾ, ಕಂಪ್ಯೂಟರ್ ಮತ್ತು ಹಾರ್ಡ್‌ಡಿಸ್ಕ್ ಅನ್ನು ವಶಪಡಿಸಿಕೊಂಡಿದ್ದಾರೆ.
ಗೋವಾ ಪ್ರವಾಸದಲ್ಲಿರುವ ಸ್ಮೃತಿ ಇರಾನಿ ಅವರು ಕಾಂದೋಳಿಂನಲ್ಲಿನ ಫ್ಯಾಬ್ ಇಂಡಿಯಾ ಮಳಿಗೆಯಲ್ಲಿ ಶುಕ್ರವಾರ ಬಟ್ಟೆ ಖರೀದಿಸಿ ಡ್ರೆಸಿಂಗ್ ರೂಂಗೆ ತೆರಳಿದ್ದರು. ಈ ವೇಳೆ ಅಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿದ್ದು ಕಂಡು ಬಂತು. ಈ ಬಗ್ಗೆ ಅವರು ಮಳಿಗೆಯ ಮ್ಯಾನೇಜರ್ ಅನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಕಲಂಘೂಟ್ ಬಿಜೆಪಿ ಶಾಸಕ ಮೈಕೆಲ್ ಲೋಬೋಗೆ ಫೋನ್ ವಿಷಯ ತಿಳಿಸಿದ್ದರು. ಬಳಿಕ ಪೊಲೀಸರಿಗೆ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


