ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸ್ಫೋಟ: 3 ಸಾವು, ಹಲವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಸ್ಫೋಟಗೊಂಡಿರುವ ಪರಿಣಾಮ ಸ್ಥಳದಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಸ್ಫೋಟಗೊಂಡಿರುವ ಪರಿಣಾಮ ಸ್ಥಳದಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.
ರಜೌರಿ ಜಿಲ್ಲೆಯು ಗಣಿಗಾರಿಕಾ ಪ್ರದೇಶವಾಗಿದ್ದು, ಇಂದು ಬೆಳಿಗ್ಗೆ 9 ಗಂಟೆಯ ವೇಳಿಗೆ ಸ್ಫೋಟ ಸಂಭವಿಸಿದೆ ಪರಿಣಾಮ ಸ್ಥಳದಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಅಲ್ಲದೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಿಸಿದ ಪೊಲಿಸರು ಗಾಯಗೊಂಡವರವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಇಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ನಡೆದಿದೆ. ಸ್ಫೋಟದಲ್ಲಿ ಮೂವರು ನಾಗರೀಕರು ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆ ಅತೀ ಹೆಚ್ಚು ಇದ್ದ ಪರಿಣಾಮ ಸುತ್ತ ಮುತ್ತಲಿನ ರಸ್ತೆಗಳಲ್ಲಿದ್ದ ಜನರಿಗೂ ಹಾನಿಯುಂಟು ಮಾಡಿದೆ. ಪ್ರಸ್ತುತ ಘಟನೆಗೆ ಪ್ರಮುಖ ಕಾರಣಗಳೇನು ಎಂಬುದು ತಿಳಿದು ಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಆಯುಕ್ತರೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


