ಆರೆಸ್ಸೆಸ್ಸ್ ಬೆಂಬಲಿಸಿಲ್ಲ: ವಿಪ್ರೋ ಮುಖ್ಯಸ್ಥ ಅಜೀಂ ಪ್ರೇಮ್‌ಜಿ
ಆರೆಸ್ಸೆಸ್ಸ್ ನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾತ್ರಕ್ಕೆ ನಾನು ಸಂಘಟನೆಯ ಅಭಿಪ್ರಾಯವನ್ನು ಬೆಂಬಲಿಸಿದೆ ಎಂದು ಅರ್ಥೈಸಿಕೊಳ್ಳಬೇಕಾಗಿಲ್ಲ...

ನವದೆಹಲಿ: ಆರೆಸ್ಸೆಸ್ಸ್ ನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾತ್ರಕ್ಕೆ ನಾನು ಸಂಘಟನೆಯ ಅಭಿಪ್ರಾಯವನ್ನು ಬೆಂಬಲಿಸಿದೆ ಎಂದು ಅರ್ಥೈಸಿಕೊಳ್ಳಬೇಕಾಗಿಲ್ಲ ಎಂದು ವಿಪ್ರೋ ಸಂಸ್ಥೆಯ ಮುಖ್ಯಸ್ಥ ಅಜೀಂ ಪ್ರೇಮ್‌ಜಿ ಹೇಳಿದ್ದಾರೆ.
ಸಾಮಾಜಿಕ ಕ್ಷೇತ್ರದಲ್ಲಿ ಆರೆಸ್ಸೆಸ್ಸ್ ಕೈಗೊಂಡ ಸೇವೆಯನ್ನು ಗೌರವಿಸುತ್ತೇನೆ. ಹಾಗಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ ಎಂದಿದ್ದಾರೆ ಪ್ರೇಮ್‌ಜಿ.
ದೆಹಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಭಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರೇಮ್‌ಜಿ, ನನ್ನನ್ನು ಭಾಗವತ್ ಈ ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ತನ್ನ ಉಪಸ್ಥಿತಿಯನ್ನು ಬೇರೆ ರೀತಿಯಲ್ಲಿ ಅರ್ಥ ಮಾಡಿಕೊಳ್ಳುವುದು ಬೇಡವೆಂದು ಹೇಳಿದ್ದಾರೆ.
ಆರೆಸ್ಸೆಸ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಸಾಮಾಜಿಕ ತಾಣಗಳಲ್ಲಿ ಪ್ರೇಮ್‌ಜಿ ವಿರುದ್ಧ ಟೀಕಾ ಪ್ರಹಾರಗಳು ನಡೆದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


