ನ್ಯಾಯಾಧಿಕರಣಗಳ ಔಚಿತ್ಯ ಪ್ರಶ್ನಿಸಿದ ಪ್ರಧಾನಿ
ನ್ಯಾಯಾಧಿಕರಣಗಳ ಕಾರ್ಯ ವೈಖರಿ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿಯಲ್ಲಿ...

ನವದೆಹಲಿ: ನ್ಯಾಯಾಧಿಕರಣಗಳ ಕಾರ್ಯ ವೈಖರಿ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮತ್ತು ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ನ್ಯಾಯಾಧಿಕರಣಗಳು ನ್ಯಾಯ ನೀಡುವ ಪ್ರಕ್ರಿಯೆಗೆ ಪೂರಕ ವಾಗಿವೆಯೋ ಅಥವಾ ಅಡ್ಡಿಯಾ ಗುತ್ತಿವೆಯೋ ಎನ್ನುವ ಕುರಿತು ಚಿಂತನೆ ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಪರಾಮರ್ಶೆ ನಡೆಸಿ
ನ್ಯಾಯಾಧೀಕರಣ ಕುರಿತುಸುಪ್ರೀಂಕೋರ್ಟ್ ಹಿರಿಯ ನ್ಯಾಯಾಧೀಶರೇ ಪರಾಮರ್ಶಿಸಬೇಕಿದೆ. ನ್ಯಾಯಾಧಿಕರಣಗಳು ಸಮರ್ಥವಾಗಿ ಕಾರ್ಯ ನಿರ್ವಹಿಸದಿದ್ದರೆ ಇವು ಗಳ ಹಣವನ್ನು ಕೋರ್ಟ್ ಗಳನ್ನು ಬಲಪಡಿಸಲು ಬಳಕೆ ಮಾಡುವುದೊಳಿತು ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅಖಿಲ ಭಾರತ ನ್ಯಾಯಾಂಗ ಸೇವೆಗಳ ಸಂಸ್ಥೆ ಸೃಷ್ಟಿಗೆ ರಾಜ್ಯ ಸರ್ಕಾರ ಮತ್ತೆ ವಿರೋಧ ವ್ಯಕ್ತಪಡಿಸಿದೆ. ಜತೆಗೆ, ನ್ಯಾಯಾಂಗದಲ್ಲಿ ಸೌಲಭ್ಯಗಳ ಸುಧಾರಣೆಗೆ ಹೆಚ್ಚು ನೆರವಿಗಾಗಿ ಮನವಿ ಮಾಡಿದೆ. ನ್ಯಾಯಾಂಗ ಸೇವೆಗಳ ಸಂಸ್ಥೆ ಸ್ಥಾಪನೆ ಸಂಬಂಧ ರಾಜ್ಯದ ನಿಲುವನ್ನು ಕೇಂದ್ರ
ಕಾನೂನು ಸಚಿವಾಲಯಕ್ಕೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


