ಬ್ರಿಟನ್ ಸರಣಿ ಅತ್ಯಾಚಾರ ಆರೋಪಿ ದೆಹಲಿಯಲ್ಲಿ ಬಂಧನ

ನವದೆಹಲಿ: ಬ್ರಿಟನ್‌ನ ಮೋಸ್ಟ್ ವಾಂಟೆಡ್ ಸರಣಿ ಅತ್ಯಾಚಾರ ಆರೋಪಿಯೊಬ್ಬನನ್ನು ದೆಹಲಿಯಲ್ಲಿ ಅಪರಾಧ ವಿಭಾಗದ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಎರಡು ಅತ್ಯಾಚಾರ ಪ್ರಕರಣ ಹಾಗೂ ಒಂದು ಕೊಲೆ ಯತ್ನ ಪ್ರಕರಣದಲ್ಲಿ ಸ್ಕಾಟ್‌ಲ್ಯಾಂಡ್ ಪೊಲೀಸರಿಗೆ ಬೇಕಾಗಿದ್ದ ಭಾರತೀಯ ಮೂಲದ ಆರೋಪಿ ರಮಿಂದರ್ ಸಿಂಗ್(28)ನನ್ನು ಬಂಧಿಸಿರುವುದಾಗಿ ದೆಹಲಿ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಂದ್ರ ಯಾದವ್ ಅವರು ತಿಳಿಸಿದ್ದಾರೆ.
ಬ್ರಿಟನ್ ಪೊಲೀಸರ ಕೋರಿಕೆಯ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ವಿದ್ಯಾಭ್ಯಾಸಕ್ಕೆಂದು ಬ್ರಿಟನ್‌ಗೆ ತೆರಳಿದ್ದ ರಮಿಂದರ್ ಸಿಂಗ್, ವಿದ್ಯಾಭ್ಯಾಸದ ಬಳಿಕ ಅಲ್ಲಿಯೇ ಕೆಲಸ ಮಾಡುತ್ತಿದ್ದ. ಆದರೆ 2012ರಲ್ಲಿ ಇಬ್ಬರು ಯುವತಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆ ಯತ್ನ ನಡೆಸಿ ಅಲ್ಲಿಂದ ಪರಾರಿಯಾಗಿದ್ದ ಎಂದು ಯಾದವ್ ಹೇಳಿದ್ದಾರೆ.
ಬ್ರಿಟನ್‌ನಿಂದ ತಲೆಮರೆಸಿಕೊಂಡಿದ್ದ ಆರೋಪಿ ಭಾರತಕ್ಕೆ ಬಂದು ನಕಲಿ ಹೆಸರು ಮತ್ತು ಗುರುತಿನಡಿ ಚಂಡೀಗಢದಲ್ಲಿ ವಾಸಿಸುತ್ತಿದ್ದ ಎಂದು ಅಪರಾಧ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


