ದೇಶ

ಆಂಧ್ರದಲ್ಲಿ ಭಾರಿ ಎನ್‌ಕೌಂಟರ್: 20 ಸ್ಮಗ್ಲರ್ ಗಳ ಹತ್ಯೆ

ರಕ್ತಚಂದನ ಮರಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ 20 ಮಂದಿ ಸ್ಮಗ್ಲರ್ ಗಳನ್ನು ಆಂಧ್ರಪ್ರದೇಶ ಪೊಲೀಸರು ಎನ್ ಕೌಂಟರ್ ಮಾಡಿ ಹೊಡೆದುರುಳಿಸಿದ್ದಾರೆ.

ಆಂಧ್ರದಲ್ಲಿ ಭಾರಿ ಎನ್‌ಕೌಂಟರ್: 20 ಸ್ಮಗ್ಲರ್ ಗಳ ಹತ್ಯೆ
ರಕ್ತಚಂದನ ಸಾಗಣೆದಾರರ ಎನ್ ಕೌಂಟರ್
Published On :

ಚಿತ್ತೂರು: ಆಂಧ್ರಪ್ರದೇಶ ಪೊಲೀಸರು ಮಂಗಳವಾರ ಮುಂಜಾನೆ ಭಾರಿ ಎನ್ ಕೌಂಟರ್ ಮಾಡಿದ್ದು, ರಕ್ತಚಂದನ ಮರಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ 20 ಮಂದಿ ಸ್ಮಗ್ಲರ್ ಗಳನ್ನು ಹೊಡೆದುರುಳಿಸಿದ್ದಾರೆ.

ಚಿತ್ತೂರು ಜಿಲ್ಲೆಯ ಚಂದ್ರಗಿರಿ ಮಂಡಲ ಅರಣ್ಯಪ್ರದೇಶದಲ್ಲಿ ಕಳ್ಳರು ರಕ್ತಚಂದನ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ 20 ಮಂದಿ ಕಳ್ಳಸಾಗಣೆದಾರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕಾಗಿಮಿಸುತ್ತಿದ್ದಂತೆಯೇ ಕಳ್ಳರು ಪೊಲೀಸರ ಮೇಲೆ ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಅನಿವಾರ್ಯವಾಗಿ ಪೊಲೀಸರು ಕಳ್ಳರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ.

ಘಟನೆಯಲ್ಲಿ ಸುಮಾರು 20 ಮಂದಿ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ತೂರು ಜಿಲ್ಲೆಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ವೇಳೆ ತಿರುಪತಿ ಬಳಿಯ ಶ್ರೀನಿವಾಸ ಮಂಗಾಪುರ ಬಳಿ 11 ಮಂದಿ ಕಳ್ಳಸಾಗಣೆದಾರರು ಹತರಾಗಿದ್ದರೆ, ಶ್ರೀವಾರಿ ಮೆಟ್ಟು ಪ್ರದೇಶದಿಂದ ಸುಮಾರು 8 ಕಿಮೀ ದೂರದ ಅರಣ್ಯ ಪ್ರದೇಶದಲ್ಲಿ 9 ಮಂದಿ ಕಳ್ಳರನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.