ಮುಂಬೈ ಸರಣಿ ಸ್ಫೋಟ: ಮಾಸ್ಟರ್ ಮೈಂಡ್ ಯಾಕೂಬ್ 'ಗಲ್ಲು' ಎತ್ತಿಹಿಡಿದ ಸುಪ್ರೀಂ
ಗಲ್ಲು ಶಿಕ್ಷೆಯ ತೀರ್ಪು ಪುನರ್ ಪರಿಶೀಲಿಸುವಂತೆ ಕೋರಿ 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಯಾಕೂಬ್ ಅಬ್ದುಲ್...

ನವದೆಹಲಿ: ಗಲ್ಲು ಶಿಕ್ಷೆಯ ತೀರ್ಪು ಪುನರ್ ಪರಿಶೀಲಿಸುವಂತೆ ಕೋರಿ 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಯಾಕೂಬ್ ಅಬ್ದುಲ್ ರಜಾಕ್ ಮೆಮೊನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ವಜಾಗೊಳಿಸಿದ್ದು, ಯಾಕೂಬ್ ಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಗುರುವಾರ ಎತ್ತಿ ಹಿಡಿದಿದೆ.
ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಯಾಕೂಬ್ ನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಆರ್. ದವೆ ಅವರ ನೇತೃತ್ವದ ತ್ರಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿತು.
2014ರ ಜೂನ್ 2ರಂದು ಮೆಮೊನ್ ಮರಣ ದಂಡನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಇದಕ್ಕೂ ಮೊದಲು, 2013ರ ಮಾರ್ಚ್ 21ರಂದು ಕೆಳ ಹಂತದ ನ್ಯಾಯಾಲಯ ಮೆಮೊನ್‌ಗೆ ವಿಧಿಸಿದ್ದ ಮರಣ ದಂಡನೆಯನ್ನು ಎತ್ತಿ ಹಿಡಿದಿತ್ತು.
ಪ್ರಕರಣ ಸಂಬಂಧ 10 ಜನರಿಗೆ ಮರಣ ದಂಡನೆ ವಿಧಿಸಿ ಮಹಾರಾಷ್ಟ್ರದ ವಿಶೇಷ ಟಾಡಾ ನ್ಯಾಯಾಲಯ ತೀರ್ಪು ನೀಡಿತ್ತು. ಆದರೆ 10 ಜನರ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಜೀವಾವಧಿಗೆ ಪರಿವರ್ತಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


