ಕೊಳವೆ ಬಾವಿಗೆ ಬಿದ್ದಿದ್ದ ಮಗು ಜಿವಂತ ರಕ್ಷಣೆ: ಚಿಕಿತ್ಸೆ ಫಲಿಸದೆ ಸಾವು
350 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದಿದ್ದ ಎರಡೂವರೆ ವರ್ಷದ ಮಗುವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತಾದರೂ...

ವೇಲೂರು: 350 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದಿದ್ದ ಎರಡೂವರೆ ವರ್ಷದ ಮಗುವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತಾದರೂ, ಮಗು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರುವ ಘಟನೆ ಭಾನುವಾರ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ವೇಲೂರು ಜಿಲ್ಲೆಯ ಆರ್ಕಾಟ್ ತಾಲೂಕಿನ ಕೂರಾಂಪಾಡಿ ಗ್ರಾಮದಲ್ಲಿ ಬೆಳಗ್ಗೆ 9.30ರ ಸುಮಾರಿನಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ತಮಿಳರಸನ್ 350 ಅಡಿ ಬಾವಿಯಲ್ಲಿ 28ನೇ ಅಡಿಯಲ್ಲಿ ಸಿಲುಕಿದ್ದನು.
ಕುತ್ತಿ ಪೂಂಗವನಂ ಮತ್ತು ಗೀತಾ ದಂಪತಿ ಪುತ್ರ ಬಾಲಕ ತಮಿಳರಸನ್ ಗೆ ಆಕ್ಸಿಜನ್ ಪೂರೈಸಿ, ಸತತ 9 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕನ ಜೀವಂತ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


