ಇಂದು ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಪುಣ್ಯತಿಥಿ
ಕನ್ನಡದ ವರನಟ ಪದ್ಮಭೂಷಣ ಡಾ. ರಾಜ್ ಕುಮಾರ್ ಇಂದಿಗೆ ನಮ್ಮನ್ನಗಲಿ ಒಂಬತ್ತು ವರ್ಷಗಳಾಗಿವೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಕುಮಾರ್ ಸ್ಮಾರಕಕ್ಕೆ ಈಗಾಗಲೇ ಭೇಟಿ ನೀಡಿರುವ ರಾಜ್ ಕುಟುಂಬ ಹಾಗೂ ರಾಜ್ ಕುಮಾರ್ ಅವರ ಸಾವಿರಾರು ಅಭಿಮಾನಿಗಳು ನಮನ ಸಲ್ಲಿಸುತ್ತಿದ್ದಾರೆ...

ಬೆಂಗಳೂರು: ಕನ್ನಡದ ವರನಟ ಪದ್ಮಭೂಷಣ ಡಾ. ರಾಜ್ ಕುಮಾರ್ ಇಂದಿಗೆ ನಮ್ಮನ್ನಗಲಿ ಒಂಬತ್ತು ವರ್ಷಗಳಾಗಿವೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಕುಮಾರ್ ಸ್ಮಾರಕಕ್ಕೆ ಈಗಾಗಲೇ ಭೇಟಿ ನೀಡಿರುವ ರಾಜ್ ಕುಟುಂಬ ಹಾಗೂ ರಾಜ್ ಕುಮಾರ್ ಅವರ ಸಾವಿರಾರು ಅಭಿಮಾನಿಗಳು ನಮನ ಸಲ್ಲಿಸುತ್ತಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಾವಿರಾರು ಜನ ಡಾ. ರಾಜ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸುತ್ತಿದ್ದು, ಸಮಾಧಿ ದರ್ಶನದ ನಂತರ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಅನ್ನದಾನವನ್ನು ರಾಜ್ ಅವರ ಹೆಸರಿನಲ್ಲಿ ಆಯೋಜಿಸಲಾಗಿದೆ.
ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜ, ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್, ನಿರ್ದೇಶಕ ದೊರೆಭಗವಾನ್ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಹಿರಿಯ ನಟ ಶಿವರಾಂ, ಮುಂತಾದ ನಟ-ನಟಿಯರು ಹಾಗೂ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿ ನೆರೆದಿದ್ದು, ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


