ದೇಶ

ಬಿಜೆಪಿ ನಕಲಿ ರಾಮಭಕ್ತರ ಪಕ್ಷ: ಶಿವಸೇನೆ

ಬಿಜೆಪಿ ನಕಲಿ ರಾಮಭಕ್ತರ ಪಕ್ಷ: ಶಿವಸೇನೆ
ಉದ್ಧವ್ ಠಾಕ್ರೆ (ಸಂಗ್ರಹ ಚಿತ್ರ)
Published On :

ಲಖನೌ: ಶಿವಸೇನೆ ಕೇಂದ್ರ ಹಾಗೂ ಮಹಾರಾಷ್ಟ್ರದ ತನ್ನ ಮಿತ್ರ ಪಕ್ಷ ಬಿಜೆಪಿ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದು, ಬಿಜೆಪಿ 'ನಕಲಿ ರಾಮ ಭಕ್ತರ ಪಕ್ಷ' ಎಂದು ಕಿಡಿಕಾರಿದೆ. ಅಲ್ಲದೆ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿವಸೇನೆ ಉತ್ತರ ಪ್ರದೇಶ ಘಟಕದ ಮುಖ್ಯಸ್ಥ ಅನಿಲ್ ಸಿಂಗ್ ಅವರು, ಉಚಿತ ಕೊಡುಗೆಗಳನ್ನು ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವುದರಿಂದ ಮುಸ್ಲಿಮರು ಸಶಕ್ತರನ್ನಾಗಿ ಮಾಡಲು ಸಾಧ್ಯವಿಲ್ಲ. ಎರಡು ಮಕ್ಕಳನ್ನು ಹೊಂದುವ ನಿಯಮವನ್ನು ಮುಸ್ಲಿಮರು ಅನುಸರಿಸಿದರೆ ಮತ್ತು ವ್ಯಾಸೆಕ್ಟಮಿಯಂತಹ ಸಂತಾನ ಹಗರ ಶಸ್ತ್ರಚಿಕಿತ್ಸೆಗೆ ಒಳಪಡಲು ಅವರು ಒಪ್ಪಿದರೆ ಮಾತ್ರ ಸಬಲೀಕರಣ ಸಾಧ್ಯ ಎಂದರು.

ನಾವು ಏನನ್ನು ಹೇಳುತ್ತೇವೆಯೋ ಅದನ್ನೇ ಮಾಡುತ್ತೇವೆ. ಆದರೆ ನಕಲಿ ರಾಮ ಭಕ್ತರ ಬಗ್ಗೆ ಎಚ್ಚರವಿರಲಿ ಎಂದು ಹೇಳುವ ಮೂಲಕ ಅನಿಲ್ ಸಿಂಗ್ ಬಿಜೆಪಿಯನ್ನು ಲೇವಡಿ ಮಾಡಿದರು.

ಬಿಜೆಪಿ ನಾಯಕರು ನಕಲಿ ರಾಮಭಕ್ತರು. ಏಕೆಂದರೆ, ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಅವರು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಹೀಗಾಗಿ ಹಿಂದುತ್ವದ ಅಜೆಂಡಾದ ಮೇಲೆ ಶಿವಸೇನೆ ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ 403 ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.