ದೆಹಲಿಯಲ್ಲಿ ಡೀಸೆಲ್ ವಾಹನಗಳ ನಿಷೇಧಕ್ಕೆ 2 ವಾರ ತಡೆ
ದೆಹಲಿ ಸರ್ಕಾರದ ಅರ್ಜಿಯ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ನ್ಯಾಯಾಧೀಶಕರಣ(ಎಲ್‌ಜಿಟಿ), ತಾನೇ ನೀಡಿದ್ದ ದೆಹೆಲಿಯಲ್ಲಿ 10 ವರ್ಷ...

ನವದೆಹಲಿ: ದೆಹಲಿ ಸರ್ಕಾರದ ಅರ್ಜಿಯ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ನ್ಯಾಯಾಧೀಶಕರಣ(ಎಲ್‌ಜಿಟಿ), ತಾನೇ ನೀಡಿದ್ದ ದೆಹೆಲಿಯಲ್ಲಿ 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ನಿಷೇಧ ಆದೇಶಕ್ಕೆ ಸೋಮವಾರ ತಡೆ ನೀಡಿದೆ.
'ಎರಡು ವಾರಗಳ ಕಾಲ ಮಾತ್ರ ವಾಹನಗಳ ಮುಟ್ಟುಗೋಲು ಹಾಕುವುದಿಲ್ಲ. ಕೇವಲ ಎರಡು ವಾರಗಳ ಕಾಲ ಮಾತ್ರ ತಡೆ ನೀಡಲಾಗಿದೆ ಎಂದು ನಾವು ಸ್ಪಷ್ಟಪಡಿಸುತ್ತಿದ್ದೇವೆ' ಎಂದು ಎನ್‌ಜಿಟಿ ಮುಖ್ಯಸ್ಥ ನ್ಯಾ.ಸ್ವತಂತ್ರ ಕುಮಾರ್ ಅವರು ಹೇಳಿದ್ದಾರೆ.
ಡೀಸೆಲ್ ವಾಹನಗಳನ್ನು ನಿಷೇಧಿಸುವ ಕುರಿತು ವರದಿ ಸಲ್ಲಿಸುವಂತೆ ದೆಹಲಿ ಸರ್ಕಾರಕ್ಕೆ ನ್ಯಾಯಾಧೀಕರಣ ಸೂಚಿಸೆದೆ.
ಡೀಸೆಲ್ ವಾಹನಗಳ ನಿಷೇಧ ಆದೇಶದ ವಿರುದ್ಧ ದೆಹಲಿ ಸರ್ಕಾರದ ಪರವಾಗಿ ಅರ್ಜಿ ಸಲ್ಲಿಸಿದ್ದ ಝುಬೇದಿಯಾ ಬೇಗಂ ಅವರು, ನ್ಯಾಯಾಧೀಕರಣದ ಆದೇಶ ಜಾರಿಗೆ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಕಳೆದ ಏಪ್ರಿಲ್ 7ರಂದು 10 ವರ್ಷ ಹಳೆಯದಾದ ಎಲ್ಲಾ ರೀತಿಯ ಡೀಸೆಲ್ ವಾಹನಗಳನ್ನು ನಿಷೇಧಿಸಬೇಕು ಎಂದು ಆದೇಶಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


