ದೇಶ

ಸಾರ್ವಜನಿಕವಾಗಿ ಯುವತಿಯೋರ್ವಳ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ವಿದ್ಯಾರ್ಥಿಗಳು

ಸಾರ್ವಜನಿಕರ ಎದುರಲ್ಲೇ ಯುವಿತಿಯೊಬ್ಬಳಿಗೆ ಡ್ರಗ್ಸ್ ನೀಡಿದ ಮೂವರು ಯುವಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅದನ್ನು...

ಸಾರ್ವಜನಿಕವಾಗಿ ಯುವತಿಯೋರ್ವಳ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ವಿದ್ಯಾರ್ಥಿಗಳು
ಸಾಂದರ್ಭಿಕ ಚಿತ್ರ
Published On :

ಫ್ಲೋರಿಡಾ: ಸಾರ್ವಜನಿಕರ ಎದುರಲ್ಲೇ ಯುವತಿಯೊಬ್ಬಳಿಗೆ ಡ್ರಗ್ಸ್ ನೀಡಿದ ಮೂವರು ಯುವಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅದನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಅಮೆರಿಕಾದ ಫ್ಲೋರಿಡಾ ಬೀಚಿನಲ್ಲಿ ಈ ಘಟನೆ ನಡೆದಿದ್ದು, ಯುವಕರು ಅತ್ಯಾಚಾರವೆಸಗುವ ವೇಳೆ ಸುತ್ತ ಮುತ್ತಲಿದ್ದವರು ಈ ದೃಶ್ಯವನ್ನು ನೋಡುತ್ತಾ ನಿಂತಿದ್ದು, ದೌರ್ಜನ್ಯವನ್ನು ತಡೆಯಲು ಮುಂದಾಗಲಿಲ್ಲ. ನೂರಾರು ಜನರ ಸಮ್ಮುಖದಲ್ಲೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಅದನ್ನು ವಿಡಿಯೋ ತೆಗೆದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಅತ್ಯಾಚಾರವೆಸಗಿದವರು ಅಲಬಮಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಈ ಯುವಕರ ಅತ್ಯಾಚಾರದ ವಿಡಿಯೋ ಬಹಿರಂಗಗೊಂಡ ಬಳಿಕ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಆದರೆ, ಅತ್ಯಾಚಾರಕ್ಕೊಳಗಾದ ಯುವತಿ ಯಾವುದೇ ರೀತಿಯ ದೂರು ದಾಖಲಿಸಿಲ್ಲ.

ಫ್ಲೋರಿಡಾದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೇ ರೀತಿಯ ಪ್ರಕರಣವೊಂದು ಕೆಲ ತಿಂಗಳುಗಳ ಹಿಂದೆ ನಡೆದಿತ್ತು. ಅತ್ಯಾಚಾರಕ್ಕೊಳಗಾದ ಯುವತಿ ಮೇಲೆ ಬೀಚಿನಲ್ಲಿ ಕುಳಿತಿದ್ದವರು ಬಿಯರ್ ಸುರಿದ ದೃಶ್ಯ ಕಂಡು ಬಂದಿತ್ತು. ಇದರ ಬೆನ್ನಲ್ಲೇ ಮತ್ತೊಬ್ಬ ಯುವತಿಗೆ ಡ್ರಗ್ಸ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.