ದೇಶ

'ತಾಳಿ ಕೀಳುವ ಚಳವಳಿ'ಗೆ ಮದ್ರಾಸ್ ಹೈಕೋರ್ಟ್ ತಡೆ

'ತಾಳಿ ಕೀಳುವ ಚಳವಳಿ'ಗೆ ಮದ್ರಾಸ್ ಹೈಕೋರ್ಟ್ ತಡೆ
ಮದ್ರಾಸ್ ಹೈಕೋರ್ಟ್
Published On :

ಚೆನ್ನೈ: ದ್ರಾವಿಡ ಕಳಗಂ(ಡಿಕೆ)ನ ವಿವಾದಾತ್ಮಕ ತಾಳಿ ಕೀಳುವ ಚಳವಳಿಗೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡದೆ.

ದ್ರಾವಿಡ ಕಳಗಂನ ತಾಳಿ ಕೀಳುವ ಚಳವಳಿಗೆ ವಿಶ್ವಹಿಂದು ಪರಿಷತ್ ಹಾಗೂ ಸಂಘಪರಿವಾರ ಸೇರಿದಂತೆ ಹಲವು ಹಿಂದು ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿ, ಚಳವಳಿಗೆ ಅವಕಾಶ ನೀಡಬಾರದು ಎಂದು ಚೆನ್ನೈಯ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದವು.

ಹಿಂದು ಪರ ಸಂಘಟನೆಗಳ ಮನವಿಯನ್ನು ಪರಿಗಣಿಸಿದ್ದ ಚೆನ್ನೈ ಪೊಲೀಸ್ ಆಯುಕ್ತರು ತಾಳಿ ಕೀಳುವ ಚಳವಳಿಗೆ ನಿಷೇಧ ಹೇರಿದ್ದರು. ಅಲ್ಲದೆ ಧರ್ಮದ ಹೆಸರಿನಲ್ಲಿ ವೈರತ್ವಕ್ಕೆ ಪ್ರಚೋದನೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಪರಿಚ್ಛೇದಗಳ ಅಡಿಯಲ್ಲಿ ಸಂಘಟನೆಯ ಮುಖ್ಯಸ್ಥ ಕೆ.ವೀರಮಣಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿ ದ್ರಾವಿಡ ಕಳಗಂ ಹೈಕೋರ್ಟ್ ಮೆಟ್ಟಿಲೇರಿತ್ತು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ತಾಳಿ ಕೀಳುವ ಚಳವಳಿಗೆ ತಡೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.