ಅಕ್ರಮ ಶಸ್ತ್ರಾಸ್ತ್ರ ಬಳಕೆ ಆರೋಪ: ಏ.23ರಂದು ಸಲ್ಮಾನ್ ಖಾನ್ ಹೇಳಿಕೆ ದಾಖಲು
ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಹಾಗೂ ಅವುಗಳನ್ನು ಬಳಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಏಪ್ರಿಲ್ 23 ರಂದು ಜೋಧಪುರ್...

ನವದೆಹಲಿ: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಹಾಗೂ ಅವುಗಳನ್ನು ಬಳಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಏಪ್ರಿಲ್ 23 ರಂದು ಜೋಧಪುರ್ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧಪುರ್ ನ್ಯಾಯಾಲಯದ ಮುಂದೆ ಹಾಜರಾಗುವ ಸಲ್ಮಾನ್ ಖಾನ್ ಪ್ರಕರಣ ಸಂಬಂದ ನೀಡುವ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ.
1988ರ ಅ.1ರಂದು ರಾಜಸ್ಥಾನದಲ್ಲಿ ಹಿಂದಿ ಚಿತ್ರ ಹಮ್ ಸಾಥ್ ಸಾಥ್ ಹೈ ಚಿತ್ರೀಕರಣದ ವೇಳೆ ತಮ್ಮ ಸಹ ನಟರೊಂದಿಗೆ ಅಳಿವಿನಂಚಿನಲ್ಲಿರುವ ಕೃಷ್ಣಮೃಗಗಳನ್ನು ಜೋಧಪುರ ಸಮೀಪದ ಕನಕಾನಿಯಲ್ಲಿ ಹತ್ಯೆ ಮಾಡಿದ ಆರೋಪ ಅವರ ಮೇಲಿದೆ. ಈ ಸಂಬಂಧ ಅರಣ್ಯ ಇಲಾಖೆ 1998ರ ಅಕ್ಟೋಬರ್ 15ರಂದು ಸಲ್ಮಾನ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಬಳಕೆ ಸಂಬಂಧ ಪ್ರಕರಣ ದಾಖಲಿಸಿತ್ತು.
ಅಕ್ರಮ ಶಸ್ತ್ರಾಸ್ತ್ರ ಕಾಯ್ಡೆಯಡಿ ಲೂನಿ ಪೊಲೀಸರು ನಟ ಸಲ್ಮಾನ್ ಖಾನ್, ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ತಬು ಮತ್ತು ನೀಲಂ ಮೇಲೆ ಪ್ರಕರಣ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


