ನಾಳೆ ರಾಹುಲ್ ಗಾಂಧಿಯಿಂದ ರೈತ ಮುಖಂಡರ ಭೇಟಿ
ಅಜ್ಞಾತವಾಸದಿಂದ ವಾಪಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರನ್ನು ಭೇಟಿ ಮಾಡಿ,...

ನವದೆಹಲಿ: ಅಜ್ಞಾತವಾಸದಿಂದ ವಾಪಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರನ್ನು ಭೇಟಿ ಮಾಡಿ, ಭೂಸ್ವಾದೀನ ಮಸೂದೆ ಕುರಿತು ಚರ್ಚಿಸಲಿದ್ದಾರೆ.
ಎನ್‌ಡಿಎ ಸರ್ಕಾರದ ಭೂಸ್ವಾಧೀನ ಮಸೂದೆ ವಿರುದ್ಧ ಕಾಂಗ್ರೆಸ್ ಭಾನುವಾರ ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಿದ್ದು, ಆ ರ್ಯಾಲಿಗೂ ಮುನ್ನಾ ದಿನವೇ ರಾಹುಲ್ ಗಾಂಧಿ ಅವರು ರೈತರ ನಿಯೋಗವನ್ನು ಭೇಟಿ ಮಾಡುತ್ತಿದ್ದಾರೆ.
ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ಪಂಜಾಬ ಮತ್ತು ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುವ ರೈತ ಸಂಘಗಳ ಮುಖಂಡರನ್ನು ರಾಹುಲ್ ಭೇಟಿ ಮಾಡುತ್ತಿದ್ದು, ಈ ವೇಳೆ ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.
ಏ.19ಕ್ಕೆ ನಡೆಯುವ ರೈತರ ಸಮಾವೇಶಕ್ಕೆ ದೇಶದ ವಿವಿಧ ಕಡೆಯಿಂದ ಲಕ್ಷಾಂತರ ರೈತರು ಆಗಮಿಸುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಸೇರಿದಂತೆ ಇತರ ನಾಯಕರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


