ದೇಶ

ಆತ್ಮಾಹುತಿ ಬಾಂಬ್ ಸ್ಫೋಟ: 33 ಸಾವು

ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ ಸುಮಾರು 33 ಜನರು ಸಾವನ್ನಪ್ಪಿರುವ ಘಟನೆ ಪೂರ್ವ ಆಫ್ಘಾನಿಸ್ಥಾನದ ಜಲಾಲಾಬಾದ್ ಪ್ರಾಂತ್ಯದಲ್ಲಿ ನಡೆದಿದೆ...

ಆತ್ಮಾಹುತಿ ಬಾಂಬ್ ಸ್ಫೋಟ: 33 ಸಾವು
ಜಲಾಲಾಬಾದ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದ ಸ್ಥಳ
Published On :

ಜಲಾಲಾಬಾದ್: ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ ಸುಮಾರು 33 ಜನರು ಸಾವನ್ನಪ್ಪಿರುವ ಘಟನೆ ಪೂರ್ವ ಆಫ್ಘಾನಿಸ್ಥಾನದ ಜಲಾಲಾಬಾದ್ ಪ್ರಾಂತ್ಯದಲ್ಲಿ ನಡೆದಿದೆ.

ಜಲಾಲಾಬಾದ್ ಪ್ರಾಂತ್ಯದಲ್ಲಿರುವ ಬ್ಯಾಂಕ್ ಒಂದರ ಆವರಣದಲ್ಲಿ ಆತ್ಮಾಹುತಿ ಬಾಂಬರ್ ನಡೆಸಿದ ಸ್ಫೋಟದಲ್ಲಿ ಸುಮಾರು 33ಕ್ಕೂ ಹೆಚ್ಚು ಜನ ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುಮಾರು 15 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ಯಾಂಕ್‌ನಲ್ಲಿ ಸರ್ಕಾರಿ ನೌಕರರು ಅವರ ವೇತನ ಗಳನ್ನ ಪಡೆದುಕೊಳ್ಳುತ್ತಿದ್ದ ವೇಳೆ ಈ ಸ್ಫೋಟ ನಡೆಸಲಾಗಿದೆ. ನೂರಾರು ಜನ ಸರ್ಕಾರಿ ಉದ್ಯೋಗಿಗಳು ಬ್ಯಾಂಕ್ ಒಳಗೆ ಹೊರಗೆ ಇದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.