ತಮಿಳುನಾಡು ವಿರೋಧಕ್ಕೆ ಸೊಪ್ಪು ಹಾಕುವ ಪ್ರಶ್ನೆಯಿಲ್ಲ: ಸಿದ್ದರಾಮಯ್ಯ
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಸುಖಾಸುಮ್ಮನೆ ವಿರೋಧ ವ್ಯಕ್ತಪಡಿಸುತ್ತಿದ್ದು, ತಮಿಳುನಾಡು ಸರ್ಕಾರ ವಿರೋಧಕ್ಕೆ ಸೊಪ್ಪು ಹಾಕುವ ಪ್ರಶ್ನೆಯೆ ಇಲ್ಲ...

ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಸುಖಾಸುಮ್ಮನೆ ವಿರೋಧ ವ್ಯಕ್ತಪಡಿಸುತ್ತಿದ್ದು, ತಮಿಳುನಾಡು ಸರ್ಕಾರ ವಿರೋಧಕ್ಕೆ ಸೊಪ್ಪು ಹಾಕುವ ಪ್ರಶ್ನೆಯೆ ಇಲ್ಲ ಎಂದು ಮುಖ್ಮಯಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕನ್ನಡ ಪರ ಸಂಘಟನೆಗಳ ನಿಯೋಗ ಒಂದು ತಿಂಗಳೊಳಗಾಗಿ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ ಮಾಡಬೇಕು ಎಂದು ಮನವಿ ಮಾಡಿದರು. ಕನ್ನಡ ಪರ ಸಂಘಟನೆಗಳ ಒತ್ತಾಯಕ್ಕೆ ಸ್ಪಂಧಿಸಿದ ಮುಖ್ಯಮಂತ್ರಿಗಳು ಮೇಕೆದಾಟು ಯೋಜನೆಗೆ ಯಾವುದೇ ಕಾನೂನಿನ ತೊಡಕಿಲ್ಲ. ಆದರೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದೆ. ಆದರೆ ಈ ಖ್ಯಾತೆ ಸರ್ಕಾರ ಸೊಪ್ಪು ಹಾಕುವ ಪ್ರಶ್ನೆಯೆ ಇಲ್ಲ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸಮಗ್ರ ಯೋಜನಾ ವರದಿ(ಡಿಪಿಆರ್) ಕೆಲಸಕ್ಕೂ ಸೂಚನೆ ನೀಡಲಾಗಿದೆ ಇದಕ್ಕೆ 25 ಕೋಟಿ ರುಪಾಯಿಯನ್ನು ಬಿಡುಗಡೆ ಸಿದ್ಧರಿದ್ದೇವೆ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯನ್ನು ಕೈಬಿಡುವುದಿಲ್ಲ ಎಂಬ ಭರವಸೆಯನ್ನು ಕನ್ನಡ ಪರ ಸಂಘಟನೆಗಳಿಗೆ ನೀಡಿದರು.
ಇದೇ ವೇಳೆ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆದಿದ್ದು, ಶಾಂತಿಯುವ ಬಂದ್ ನಡೆಸಿದ್ದಕ್ಕೆ ಕನ್ನಡ ಪರ ಸಂಘಟನೆಗಳನ್ನು ಸಿದ್ದರಾಮಯ್ಯ ಅವರು ಅಭಿನಂಧಿಸಿದರು. ಮೇಕೆದಾಟು ಯೋಜನೆ ಜಾರಿಗೆ ಕನ್ನಡ ಪರ ಸಂಘಟನೆಗಳು ನೀಡದ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


