ಪ್ರಧಾನಿ ಮೋದಿ ಕನಸಾದ ಸ್ವಚ್ಛ ಭಾರತ್ ಜಾಹಿರಾತಿಗೆ ಬರೋಬ್ಬರಿ 200 ಕೋಟಿ!
ಭಾರತವನ್ನು ಸ್ವಚ್ಛ ದೇಶವನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ವಚ್ಛ ಭಾರತ್ ಅಭಿಯಾನವನ್ನು ಚುರುಕುಗೊಳಿಸಲು...

ನವದೆಹಲಿ: ಭಾರತವನ್ನು ಸ್ವಚ್ಛ ದೇಶವನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ವಚ್ಛ ಭಾರತ್ ಅಭಿಯಾನವನ್ನು ಚುರುಕುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅಭಿಯಾನದ ಜಾಹಿರಾತಿಗಾಗಿ ಬರೋಬ್ಬರಿ 20 ಕೋಟಿ ರುಪಾಯಿಯನ್ನು ವಿನಿಯೋಗಿಸಲಿದೆ.
ಸ್ವಚ್ಛ ಭಾರತ್ ಅಭಿಯಾನ ಯೋಜನೆಗೆ ಪರಿಣಾಮಕಾರಿಯಾಗಿ ಪ್ರಚಾರ ನೀಡಬೇಕೆಂಬ ಉದ್ದೇಶ ಹಾಗೂ ಹಳ್ಳಿ ಹಳ್ಳಿಯಲ್ಲಿಯೂ ಜಾಹಿರಾತು ನೀಡಲು ಬರೋಬ್ಬರಿ 200 ಕೋಟಿ ರೂಪಾಯಿಗಳನ್ನು ತೆಗೆದಿರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಅಕ್ಟೋಬರ್ ನಲ್ಲಿ ಮೋದಿ ಅವರು ಪ್ರಾರಂಭಿಸಿದ ಈ ಯೋಜನೆಗೆ ಹೆಚ್ಚು ಪರಿಣಾಮಕಾರಿ ತನರಿಗೆ ತಲುಪಿಸುವ ಉದ್ದೇಶದಿಂದಾಗಿ ಜಾಹಿರಾತುಗಳು ಜನರನ್ನು ಹೆಚ್ಚು ಆಕರ್ಷಿಸುವಂತೆ ಮಾಡಲು ಸರ್ಕಾರ ನಿರ್ಧರಿಸಿದ್ದು ಈಗಾಗಲೇ 12 ಜಾಹಿರಾತು ಸಂಸ್ಥೆಗಳ ಜೊತೆ ಪಿಎಂಓ ಸ್ವಚ್ಛ ಭಾರತದ ಜಾಹಿರಾತಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಹನ್ನೇರಡು ಜಾಹಿರಾತು ಸಂಸ್ಧೆಗಳ ಪೈಕಿ ಅಂತಿಮವಾಗಿ ಒಂದು ಸಂಸ್ಥೆಯನ್ನು ಆಯ್ಕೆ ಮಾಡಲಿದ್ದು, ಅತ್ಯಂತ ವಿಭಿನ್ನವಾದ ಹಾಗೂ ಜನಾಕರ್ಷಣೀಯವಾದ ಈ ಹಿಂದೆ ಬಂದಿರುವ ಎಲ್ಲಾ ಸರ್ಕಾರಿ ಜಾಹಿರಾತುಗಳಿಗಿಂತ ಭಿನ್ನವಾಗಿರುವಂತ ಜಾಹಿರಾತು ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ 200ಕೋಟಿ ರೂಪಾಯಿಗಳನ್ನು ತೆಗೆದಿರಿಸಲು ನಿರ್ಧರಿಸಲಾಗಿದೆ ಎಂದು ಪ್ರಸಾರಣಾ (ಐ&ಬಿ) ಸಚಿವಾಲಯದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


