ಬೋಸ್ ಕುಟುಂಬಕ್ಕೆ ಪ್ರಧಾನಿ ಆಹ್ವಾನ, ಮೇ 17ಕ್ಕೆ ನೇತಾಜಿ ಸಾವಿನ ರಹಸ್ಯ ಬಹಿರಂಗ ಸಾಧ್ಯತೆ
ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಸಾವಿನ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್ ಕುಟುಂಬದ 10 ಸದಸ್ಯರಿಗೆ ದೆಹಲಿ ಭೇಟಿಗೆ....

ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಸಾವಿನ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್ ಕುಟುಂಬದ 10 ಸದಸ್ಯರಿಗೆ ದೆಹಲಿ ಭೇಟಿಗೆ ಆಹ್ವಾನ ನೀಡಿದ್ದಾರೆ ಎಂದು ಸೋಮವಾರ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರು ಬೋಸ್ ಕುಟುಂಬದ ಎಲ್ಲಾ ಸದಸ್ಯರನ್ನು ಭೇಟಿ ಮಾಡಲು ಬಯಸಿದ್ದು, ಮೇ 17ಕ್ಕೆ ದೆಹಲಿಗೆ ಬರುವಂತೆ ಆಹ್ವಾನ ಪತ್ರಿಕೆ ಕಳುಹಿಸಿದ್ದಾರೆ.
ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಕುರಿತು ಕುಟುಂಬದೊಂದಿಗೆ ಚರ್ಚಿಸಿ, ಬಳಿಕ ಬಹಿರಂಗಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗಷ್ಟೆ ಬರ್ಲಿನ್‌ನಲ್ಲಿ ಬೋಸ್ ಸಂಬಂಧ ಸೂರ್ಯ ಕುಮಾರ್ ಬೋಸ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸುವ ಕುರಿತು ಪರಿಶೀಲಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದರು.
ಬೋಸ್ ಕುಟುಂಬದ ವಿರುದ್ಧ ನೆಹರೂ ಸರ್ಕಾರ ಎರಡು ದಶಕಗಳ ಕಾಲ ನಡೆಸಿದ ಬೇಹುಗಾರಿಕೆ ವಿಚಾರ ಸೋರಿಕೆಯಾಗುತ್ತಿದ್ದಂತೆ ನೇತಾಜಿ ಸಾವಿನ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


