ದೇಶ

ಚಲಿಸುತ್ತಿದ್ದ ಬಸ್‌ನಲ್ಲಿ ಅಗ್ನಿ ಅವಘಡ: 9 ಜನ ಸಜೀವ ದಹನ

ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ...

ಚಲಿಸುತ್ತಿದ್ದ ಬಸ್‌ನಲ್ಲಿ ಅಗ್ನಿ ಅವಘಡ: 9 ಜನ ಸಜೀವ ದಹನ
ಬೆಂಕಿ ಅವಘಡ
Published On :

ಅಮೇಥಿ: ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಪೀಪಾರ್‌ಪುರ್‌ನಲ್ಲಿ ಸಂಭವಿಸಿದೆ.

42 ಜನ ಪ್ರಯಾಣಿಕರನ್ನು ಹೊತ್ತ ಬಸ್ ಸುಲ್ತಾನ್‌ಪುರಕ್ಕೆ ಹೋಗುತ್ತಿತ್ತು. ಈ ವೇಳೆ ಪೀಪಾರ್‌ಪುರ್‌ನ ರಾಮ್ ಗಾಂವ್ ಎಂಬ ಗ್ರಾಮದ ಬಳಿ ಬರುತ್ತಿದಂತೆ ಎಂಜಿನ್‌ನಲ್ಲಿ ಷಾರ್ಟ್ ಸರ್ಕ್ಯೂಟ್ ಆಗಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ.

ಇನ್ನುಳಿದಂತೆ ಹಲವರು ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಬಂದಿದ್ದು, ಹೆಚ್ಚು ಪ್ರಾಣಹಾನಿ ಸಂಭವಿಸಿಲ್ಲ.

ಆದರೆ, 9 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಗಾಯಗೊಂಡಿರುವ ಆರು ಜನರ ಸ್ತಿತಿ ಚಿಂತಾಜನಕವಾಗಿದೆ  ಎಂದು  ಅಮೇಥಿ  ಪೊಲೀಸ್ ವರಿಷ್ಠಾಧಿಕಾರಿ ಹೀರಾಲಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.