ಕೇಜ್ರಿವಾಲ್ ಒಬ್ಬ ಸರ್ವಾಧಿಕಾರಿ, ಆಪ್ ಖಾಪ್ ಪಂಚಾಯ್ತಿ ಆಗಿದೆ: ಪ್ರಶಾಂತ್ ಭೂಷಣ್
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಒಬ್ಬ ಸರ್ವಾಧಿಕಾರಿ, ಎಎಪಿ ಖಾಪ್ ಪಂಚಾಯ್ತಿ ಆಗಿದೆ ಎಂದು ಆಪ್ ಉಚ್ಚಾಟಿತ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಒಬ್ಬ ಸರ್ವಾಧಿಕಾರಿ, ಎಎಪಿ ಖಾಪ್ ಪಂಚಾಯ್ತಿ ಆಗಿದೆ ಎಂದು ಆಪ್ ಉಚ್ಚಾಟಿತ ನಾಯಕ ಪ್ರಶಾಂತ್ ಭೂಷಣ್ ಅವರು ಮಂಗಳವಾರ ಹೇಳಿದ್ದಾರೆ.
ಪಕ್ಷದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದವ್ ಅವರು, ಕೇಜ್ರಿವಾಲ್ ಅವರ ನಿಜ ಬಣ್ಣ ಗುರುತಿಸದೆ ನಾವು ದೊಡ್ಡ ತಪ್ಪು ಮಾಡಿದೆವು ಎಂದು ಹೇಳಿದ್ದಾರೆ.
ಎಎಪಿ ಖಾಪ್ ಪಂಚಾಯತ್ ರೀತಿ ಆಗುತ್ತಿದೆ. ಕೇಜ್ರಿವಾಲ್ ಅಸಲಿ ಬಣ್ಣ ಈಗ ಬಯಲಾಗುತ್ತಿದೆ. ಕೇಜ್ರಿವಾಲ್ ಒಬ್ಬ ಸರ್ವಾಧಿಕಾರಿ ಎಂದು ಭೂಷಣ್ ಮತ್ತು ಯಾದವ್ ಆರೋಪಿಸಿದರು.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಶಿಸ್ತುಪಾಲನಾ ಸಮಿತಿ ಕೈಗೊಂಡ ನಿರ್ಧಾರದಿಂದ ತಮಗೆ ತುಂಬಾ ಬೇಸರವಾಗಿದೆ. ಅಲ್ಲದೆ ನಮ್ಮನ್ನು ಪಕ್ಷದಿಂದ ಉಚ್ಚಾಟಿಸಿರುವುದು ಅಚ್ಚರಿ ತಂದಿಲ್ಲ. ಕಳೆದ ಕೆಲವು ದಿನಗಳ ಬೆಳವಣಿಗೆ ಆ ನಿಲುವಿನ ಮುನ್ಸೂಚನೆಯೇ ಆಗಿತ್ತು ಎಂದು ಯಾದವ್ ಮತ್ತು ಭೂಷಣ್ ಹೇಳಿದ್ದಾರೆ.
ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿಯೇ ಬಂಡೆದಿದ್ದ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಸೇರಿದಂತೆ ನಾಲ್ವರು ನಾಯಕರನ್ನು ಆಮ್ ಆದ್ಮಿ ಪಕ್ಷದ ಸೋಮವಾರ ರಾತ್ರಿ ಉಚ್ಚಾಟಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


