ಪೋರ್‌ಬಂದರಿನಲ್ಲಿ ಪಾಕ್ ದೋಣಿ ವಶ: 8 ಮಂದಿ ಬಂಧನ
ಪೋರ್‌ಬಂದರಿನ ಕರಾವಳಿ ತೀರದಲ್ಲಿ ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಪಾಕಿಸ್ತಾನಕ್ಕೆ ಸೇರಿದ ದೋಣಿಯನ್ನು ಭಾರತೀಯ ನೌಕಾ ಪಡೆ...

ಅಹಮದಾಬಾದ್ : ಪೋರ್‌ಬಂದರಿನ ಕರಾವಳಿ ತೀರದಲ್ಲಿ ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಪಾಕಿಸ್ತಾನಕ್ಕೆ ಸೇರಿದ ದೋಣಿಯನ್ನು ಭಾರತೀಯ ನೌಕಾ ಪಡೆ ಹಾಗೂ ಕರಾವಳಿ ಪಡೆ ವಶಕ್ಕೆ ಪಡೆದುಕೊಂಡಿದ್ದು, 8 ಮಂದಿಯನ್ನು ಬಂಧಿಸಿದ್ದಾರೆ.
ಪಾಕಿಸ್ತಾನಕ್ಕೆ ಸೇರಿದ ಈ ದೋಣಿಯಲ್ಲಿ ಸಾಗಿಸುತ್ತಿದ್ದ 140 ಕೆಜಿ ಹೆರಾಯಿನ್ ವಶಪಡಿಸಿಕೊಡಿರುವ ನೌಕಾಪಡೆ ಮೊಬೈಲ್ ಫೋನ್ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದೆ.
ಬಂಧಿತ 8 ಮಂದಿ ಪಾಕಿಸ್ತಾನಕ್ಕೆ ಸೇರಿದ ನಾವಿಕರಾಗಿದ್ದಾರೆ ಎಂದು ವಿಚಾರಣೆ ನಡೆಸಿದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 26 /11 ಮುಂಬಯಿ ದಾಳಿ ಮಾದರಿಯಲ್ಲೇ ಮತ್ತೊಂದು ವಿಧ್ವಂಸಕ ಕೃತ್ಯ ನಡೆಸಲು ಶಸ್ತ್ರಾಸ್ತ್ರಗಳನ್ನು ಸಮುದ್ರದ ಮೂಲಕ ಪಾಕ್ ಉಗ್ರರು ಸಾಗಿಸುತ್ತಿದ್ದಾರೆಂದು ಇಂಟೆಲಿಜೆನ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 31 2014 ರಂದು ಗುಜರಾತಿನ ಪೋರ್‌ಬಂದರಿನ ಕರಾವಳಿಯಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನಕ್ಕೆ ಸೇರಿದ ಮೀನುಗಾರಿಕಾ ದೋಣಿಯನ್ನು ಭಾರತೀಯ ನೌಕಾಪಡೆ ಸ್ಫೋಟಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


