ಬೋಸ್ ಕುಟುಂಬಕ್ಕೆ ಮೋದಿ ಆಹ್ವಾನ
ನೇತಾಜಿ ಸುಭಾಷ್ ಚಂದ್ರಬೋಸ್ ನ ಕುಟುಂಬ ಮೇಲೆ ನಡೆದಿದ್ದ ಬೇಹುಗಾರಿಕೆ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಬೋಸ್ ಅವರ ಕುಟುಂಬದ ಸದಸ್ಯರಿಗೆ ಆಹ್ವಾನ ನೀಡಿದ್ದಾರೆ...

ನವದೆಹಲಿ: ನೇತಾಜಿ ಸುಭಾಷ್ ಚಂದ್ರಬೋಸ್ ನ ಕುಟುಂಬ ಮೇಲೆ ನಡೆದಿದ್ದ ಬೇಹುಗಾರಿಕೆ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಬೋಸ್ ಅವರ ಕುಟುಂಬದ ಸದಸ್ಯರಿಗೆ ಆಹ್ವಾನ ನೀಡಿದ್ದಾರೆ.
ಮೇ. 17ಕ್ಕೆ ಮಾತುಕತೆಗೆ ಕರೆದಿರುವ ಮೋದಿ ಅವರು ನೇತಾಜಿ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಬಗ್ಗೆ ಬೋಸ್ ಕುಟುಂಬದೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಯಿದೆ.
ಬರ್ಲಿನ್ ನಲ್ಲಿ ಮೋದಿ ಅವರನ್ನು ಭೇಟಿಯಾಗಿದ್ದ ಸೂರ್ಯ ಬೋಸ್ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಮೋದಿ ಅವರು ಈ ಪ್ರಕರಣದ ತನಿಖೆಯನ್ನು ಖುದ್ದು ತಾವೇ ಮಾಡುವುದಾಗಿ ಸೂರ್ಯ ಬೋಸ್ ಅವರಿಗೆ ಭರವಸೆ ನೀಡಿದ್ದರು. ನೆಹರೂ ಸರ್ಕಾರ 20 ವರ್ಷಗಳ ಕಾಲ ಬೋಸ್ ಕುಟುಂಬದ ಮೇಲೆ ಬೇಹುಗಾರಿಕೆ ನಡೆಸಿರುವ ವಿಷಯವನ್ನು ಕೇಂದ್ರ ಸರ್ಕಾರವು ಬಹಿರಂಗಪಡಿಸಿತ್ತು. ರಹಸ್ಯ ಫೈಲುಗಳಲ್ಲಿ ಕೇಂದ್ರವು ಕೇವಲ 2 ಫೈಲುಗಳನ್ನು ಬಹಿರಂಗಪಡಿಸಿದ್ದು ದೇಶಾದ್ಯಂತ ವ್ಯಾಪಕ ಚರ್ಚೆಗೆ ಎಡೆಮಾಡಿತ್ತು. ಉಳಿದ ಕಡತಗಳನ್ನು ಕೂಡ ಬಹಿರಂಗ ಪಡಿಸುವಂತೆ ತೀವ್ರ ಒತ್ತಾಯ ಕೇಳಿ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


