ದೇಶ

ದೆವ್ವದ ಬಾಯಲ್ಲಿ ಧರ್ಮ: ವೆಂಕಯ್ಯ ನಾಯ್ಡು

ಜನರಿಗೆ ಕಾಂಗ್ರೆಸ್ ತಪ್ಪು ಮಾಹಿತಿ ರವಾನಿಸುತ್ತಿದೆ ಎಂದು ಆರೋಪಿಸಿರುವ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು...

ದೆವ್ವದ ಬಾಯಲ್ಲಿ ಧರ್ಮ: ವೆಂಕಯ್ಯ ನಾಯ್ಡು
ವೆಂಕಯ್ಯನಾಯ್ಡು
Published On :

ನವದೆಹಲಿ: ಭೂಸ್ವಾಧೀನ ಸುಗ್ರೀವಾಜ್ಞೆಗೆ ಸಂಬಂಧಿಸಿ ಬಿಜೆಪಿ-ಕಾಂಗ್ರೆಸ್ ನಡುವಿನ ವಾಕ್ಸಮರ ಮುಂದುವರಿದಿದೆ. ಜನರಿಗೆ ಕಾಂಗ್ರೆಸ್ ತಪ್ಪು ಮಾಹಿತಿ ರವಾನಿಸುತ್ತಿದೆ ಎಂದು ಆರೋಪಿಸಿರುವ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು, ಕಾಂಗ್ರೆಸ್ ಅನ್ನು `ದೆವ್ವ'ಕ್ಕೆ ಹೋಲಿಸಿದ್ದಾರೆ.

ಮಂಗಳವಾರ ಮಾತನಾಡಿದ ನಾಯ್ಡು, ಸುಗ್ರೀವಾಜ್ಞೆ ಹೊರಡಿಸಿರುವುದನ್ನು ಕಾಂಗ್ರೆಸ್ ಖಂಡಿಸುತ್ತಿರುವುದು `ದೆವ್ವ ಧರ್ಮ ಗ್ರಂಥ ಉದ್ಧರಿಸಿದಂತಾಗಿದೆ'. ಕಾಂಗ್ರೆಸ್ 50 ವರ್ಷಗಳಲ್ಲಿ 456 ಸುಗ್ರೀವಾಜ್ಞೆಗಳನ್ನು ಹೊರಡಿಸಿದೆ. ಹಾಗಾಗಿ ಕಾಂಗ್ರೆಸ್‍ಗೆ ನಮ್ಮ ಸುಗ್ರೀವಾಜ್ಞೆಯನ್ನು `ಪ್ರಜಾಪ್ರಭುತ್ವದ ಕಗ್ಗೊಲೆ' ಎಂದು ಬಣ್ಣಿಸುವ ನೈತಿಕ ಹಕ್ಕಿಲ್ಲ ಎಂದಿದ್ದಾರೆ.

ಇದೇ ವೇಳೆ, ಏನೇ ಆದರೂ ಸುಗ್ರೀವಾಜ್ಞೆಯನ್ನು ಸಮರ್ಥಿಸಿಕೊಳ್ಳಿ ಎಂದು ತನ್ನ ಎಲ್ಲ ಸಂಸದರಿಗೆ ಬಿಜೆಪಿ ಆದೇಶಿಸಿದೆ. ಮಂಗಳವಾರ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಂಸದರಿಗೆ ಈ ರೀತಿ ಸೂಚಿಸಿರುವ ಪಕ್ಷ, ಈ ವೇಳೆ ಗುಜರಾತ್ ಮಾದರಿಯನ್ನು ಪ್ರಸ್ತಾಪಿಸಿ ಎಂದೂ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.