ದೇಶ

ನಟಿ ಪೂಜಾ ಗಾಂಧಿ ವಿರುದ್ಧ ಬಂಧನ ವಾರೆಂಟ್

2013ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಟಿ ಪೂಜಾ ಗಾಂಧಿ ವಿರುದ್ಧ...

ನಟಿ ಪೂಜಾ ಗಾಂಧಿ ವಿರುದ್ಧ ಬಂಧನ ವಾರೆಂಟ್
ನಟಿ ಪೂಜಾ ಗಾಂಧಿ
Published On :

ರಾಯಚೂರು: 2013ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಟಿ ಪೂಜಾ ಗಾಂಧಿ ವಿರುದ್ಧ ರಾಯಚೂರಿನ 2ನೇ ಜೆಎಂಎಫ್ ಸಿ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿದೆ.

ಚುನಾವಣೆ ಪ್ರಚಾರದ ವೇಳೆ ಪರವಾನಗಿ ಪಡೆಯದ ವಾಹನದಲ್ಲಿ ತೆರಳಿ ಅವರು ಪ್ರಚಾರ ಕೈಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ನೀಡಿದ ದೂರು ಆಧರಿಸಿ, ನಗರದ ಸದರ್ ಬಜಾರ್ ಠಾಣೆಯಲ್ಲಿ ಪೂಜಾ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಮೂರು ಬಾರಿ ಗೈರು ಹಾಜರಾಗಿದ್ದರಿಂದ ನ್ಯಾಯಾಧೀಶರು ಪೂಜಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ್ದಾರೆ.

ಜಾಮೀನಿಗಾಗಿ ಪೂಜಾ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಧೀಶರು ಪೂಜಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.