ದೇಶ

ಸಾಮೂಹಿಕ ಅತ್ಯಾಚಾರ: ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 14 ವರ್ಷದ ಬಾಲಕಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ...

ಸಾಮೂಹಿಕ ಅತ್ಯಾಚಾರ: ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ
ಸಾಮೂಹಿಕ ಅತ್ಯಾಚಾರ: ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ
Published On :

ಮಥುರಾ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 14 ವರ್ಷದ ಬಾಲಕಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ದೇಹದ ಶೇ.70ರಷ್ಟು ಭಾಗ ಸುಟ್ಟುಹೋಗಿದೆ. ಕೂಡಲೇ ಆಕೆಯನ್ನು ದೆಹಲಿಯಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲತಃ ಕೋಸಿಕಳನ್ ಗ್ರಾಮದ ನಿವಾಸಿಯಾಗಿರುವ ಬಾಲಕಿ ಕಳೆದ ಭಾನುವಾರ ಬಹಿರ್ದೆಸೆಗೆಂದು ಹೊರಗೆ ಬಂದಿದ್ದ ಬಾಲಕಿಯನ್ನು ಐದು ಮಂದಿ ದುಷ್ಕರ್ಮಿಗಳು ಎಳೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಮಾಡಿ, ಪರಾರಿಯಾಗಿದ್ದರು.

ಈ ವಿಚಾರವನ್ನು ತಿಳಿದ ಪೋಷಕರು ಬಾಲಕಿಯ ಭವಿಷ್ಯ ಹಾಳಾಗುತ್ತದೆ ಎಂದು ಭಯಗೊಂಡು ವಿಚಾರವನ್ನು ಮುಚ್ಚಿಡಲು ಯತ್ನಿಸಿದರು. ಆದರೆ ತನ್ನ ಮೇಲಾದ ದೌರ್ಜನ್ಯವನ್ನು ಸಹಿಸಿಕೊಳ್ಳದ ಬಾಲಕಿ ತನ್ನ ಕೊಠಡಿಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಬೆಳಗ್ಗೆ ಬಾಲಕಿಯ ಸಹೋದರ ಆಕೆಯ ಕೊಠಡಿಗೆ ತೆರಳಿದಾಗ ಈ ವಿಚಾರ ಬಹಿರಂಗಗೊಂಡಿದೆ. ಬಾಲಕಿಯ ಕೊಠಡಿಗೆ ಆಕೆಯ ಸಹೋದರ ಪ್ರವೇಶ ಮಾಡಿದಾಗ ಆಕೆ ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿ ಕಿರುಚಾಡುತ್ತಿದ್ದಳು. ಕೂಡಲೇ ಬಾಲಕ ಆಕೆಯ ಮೇಲೆ ನೀರನ್ನು ಸುರಿದಿದ್ದಾನೆ. ಅಷ್ಟರಲ್ಲಾಗಲೇ ಬಾಲಕಿಯ ದೇಹದ ಶೇ.70ರಷ್ಟು ಭಾಗ ಸುಟ್ಟುಹೋಗಿದೆ.

ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತುರ್ತು ಕಾರ್ಯಾಚಾರಣೆ ನಡೆಸಿ ಓರ್ವ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು ಐದು ಮಂದಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.