ದೇಶ

ಭೂಸ್ವಾಧೀನ ಮಸೂದೆ ವಿರೋಧಿ ಪ್ರತಿಭಟನಾ ಸ್ಥಳದಿಂದ ಮಾಧ್ಯಮಗಳನ್ನು ದೂರವಿಡಿ: ಕೇಜ್ರಿವಾಲ್

ಕೇಂದ್ರ ಸರ್ಕಾರದ ಉದ್ದೇಶಿಸಿತ ಭೂಸ್ವಾಧೀನ ಮಸೂದೆ ವಿರೋಧಿಸಿ ಆಮ್ ಆದ್ಮಿ ಪಕ್ಷ(ಎಎಪಿ) ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳದಿಂದ ಮಾಧ್ಯಮಗಳನ್ನು....

ಭೂಸ್ವಾಧೀನ ಮಸೂದೆ ವಿರೋಧಿ ಪ್ರತಿಭಟನಾ ಸ್ಥಳದಿಂದ ಮಾಧ್ಯಮಗಳನ್ನು ದೂರವಿಡಿ: ಕೇಜ್ರಿವಾಲ್
ಭೂಸ್ವಾಧೀನ ಮಸೂದೆ ವಿರೋಧಿಸಿ ಎಎಪಿ ಪ್ರತಿಭಟನೆ
Published On :

ನವದೆಹಲಿ: ಕೇಂದ್ರ ಸರ್ಕಾರದ ಉದ್ದೇಶಿಸಿತ ಭೂಸ್ವಾಧೀನ ಮಸೂದೆ ವಿರೋಧಿಸಿ ಆಮ್ ಆದ್ಮಿ ಪಕ್ಷ(ಎಎಪಿ) ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳದಿಂದ ಮಾಧ್ಯಮಗಳನ್ನು ದೂರುವಿಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಪೊಲೀಸರಿಗೆ ಕೇಳಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇನ್ನು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆಪ್ ನಾಯಕ ಆಶುತೋಷ್ ಅವರು, ಬಿಜೆಪಿ ಸರ್ಕಾರ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸಲು ದೇಶದ ವಿವಿಧ ರಾಜ್ಯಗಳಿಂದ ರೈತರು ಆಗಮಿಸುತ್ತಿದ್ದಾರೆ ಎಂದು ಹೇಳಿರುವ ಆಶುತೋಷ್, ಒಂದು ವೇಳೆ ಕೇಂದ್ರ ಸರ್ಕಾರ ಭೂಸ್ವಾಧೀನ ಮಸೂದೆ ಹಿಂಪಡೆಯದಿದ್ದರೆ ರಾಷ್ಟ್ರವ್ಯಾಪಿ ಚಳವಳಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಜಂತರ್-ಮಂತರ್‌ನಲ್ಲಿ ರೈತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.