ರೈತ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಕೇಜ್ರಿವಾಲ್ ಆದೇಶ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಪಕ್ಷದ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನು ನ್ಯಾಯಾಂಗ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಪಕ್ಷದ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ಘಟನೆ ಕುರಿತು ತನಿಖೆಗೆ ಮಾಡುವಂತೆ ದೆಹಲಿ ಪೊಲೀಸರಿಗೆ ಆದೇಶಿಸಿದೆ.
ಪ್ರಕರಣದ ಕುರಿತು ತನಿಖೆ ನಡೆಸುವಂತೆ ನವದೆಹಲಿ ಜಿಲ್ಲಾ ನ್ಯಾಯಾಧೀಶರನ್ನು ದೆಹಲಿ ಸರ್ಕಾರ ಕೇಳಿಕೊಂಡಿದ್ದು, ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ದೆಹಲಿ ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ರ್ಯಾಲಿ ವೇಳೆ ಜಂತರ್ ಮಂತರ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರಾಜಸ್ಥಾನ ಮೂಲದ ರೈತ ಗಜೇಂದ್ರ ಸಿಂಗ್ ಅವರ ಕುಟುಂಬಕ್ಕೆ ಕೇಜ್ರಿವಾಲ್ ಸಾಂತ್ವಾನ ಹೇಳಿದ್ದು, ಇದೊಂದು ತೀವ್ರ ದುಃಖಕರ ಘಟನೆ. ಅವರ ಸಾವಿನಿಂದ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರಾಜಕೀಯ ಆರೋಪ, ಪ್ರತ್ಯಾರೋಪ ಮಾಡಲು ದೆಹಲಿ ಸರ್ಕಾರ ಬಯಸುವುದಿಲ್ಲ. ಆದರೆ ಸಾರ್ವಜನಿಕವಾಗಿಯೇ ಇಂತಹ ಘಟನೆ ನಡೆಯಲು ಏನು ಕಾರಣ ಎಂಬುದನ್ನು ಪತ್ತೆ ಹಚ್ಚಲು ಎಲ್ಲಾ ರೀತಿಯಿಂದಲೂ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


