ಅಮೆರಿಕದ ಪ್ರಧಾನ ಸರ್ಜನ್ ಆಗಿ ಅಧಿಕಾರ ಸ್ವೀಕರಿಸಿದ ಕನ್ನಡಿಗ
ಅಮೆರಿಕದ ಇತಿಹಾಸದಲ್ಲಿಯೇ ಪ್ರಧಾನ ಸರ್ಜನ್ ಸ್ಥಾನವನ್ನು ಅಲಂಕರಿಸಿದ ಅತಿ ಚಿಕ್ಕ ವಯಸ್ಸಿನವರು ಎಂಬ ಹೆಗ್ಗಳಿಕೆ ಕರ್ನಾಟಕದ ಮಂಡ್ಯ ಮೂಲದ...

ವರ್ಜಿನಿಯಾ: ಅಮೆರಿಕದ ಇತಿಹಾಸದಲ್ಲಿಯೇ ಪ್ರಧಾನ ಸರ್ಜನ್ ಸ್ಥಾನವನ್ನು ಅಲಂಕರಿಸಿದ ಅತಿ ಚಿಕ್ಕ ವಯಸ್ಸಿನವರು ಎಂಬ ಹೆಗ್ಗಳಿಕೆ ಕರ್ನಾಟಕದ ಮಂಡ್ಯ ಮೂಲದ ಡಾ. ವಿವೇಕ್ ಹಲ್ಲೇಗೆರೆ ಮೂರ್ತಿ ಪಾತ್ರರಾಗಿದ್ದಾರೆ.
ಅಮೆರಿಕದ ಆರೋಗ್ಯ ಸೇವೆಯ ಉನ್ನತ ಹುದ್ದೆಯಾದ ಸರ್ಜನ್ ಜನರಲ್ ಆಗಿ ಮಂಡ್ಯ ಜಿಲ್ಲೆಯ ಹಲ್ಲೆಗೆರೆ ಮೂಲದ ಅಮೆರಿಕದ ವೈದ್ಯ ಡಾ.ವಿವೇಕ್ ಮೂರ್ತಿ (37) ಅವರು ಗುರುವಾರ ಇಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಅಮೆರಿಕದ ಉಪಾಧ್ಯಕ್ಷ ಜೋಸ್ ಬಿಡೆನ್ ಅವರು ಮೂರ್ತಿಗೆ ಅವರಿಗೆ ಪ್ರಮಾಣ ವಚನ ಬೋಧಿಸಿದ್ದು, ಭಗದ್ಗೀತೆ ಹೆಸರಿನಲ್ಲಿ ಮೂರ್ತಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ನಂತರ ಒಟ್ಟು ನಾಲ್ಕು ವರ್ಷಗಳವರೆಗೆ ಅವರು ಈ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಾರೆ.
‘ಸರ್ಜನ್ ಜನರಲ್ ಹುದ್ದೆಯು ಅತ್ಯಂತ ಶ್ರೇಷ್ಠವಾದ ಗೌರವ ಮತ್ತು ಅಷ್ಟೇ ಗಂಭೀರವಾದ ಜವಾಬ್ದಾರಿ. ಈ ಅವಕಾಶ ನೀಡಿದ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಕೃತಜ್ಞತೆ’ ಎಂದು ಡಾ.ವಿವೇಕ್ ಮೂರ್ತಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


